May 22, 2022

Newsnap Kannada

The World at your finger tips!

WhatsApp Image 2022 03 30 at 5.05.28 PM

ಭಾರತೀನಗರದ ಬಳಿ ಬೈಕ್ ಗೆ ಮಿನಿ ಬಸ್ ಡಿಕ್ಕಿ – 50 ಮಂದಿಗೆ ಗಾಯ

Spread the love

ಗಾರ್ಮೆಂಟ್ಸ್​ ಕಾರ್ಮಿಕರಿದ್ದ ಮಿನಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿ 50 ಮಂದಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಣ್ಣನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೆಲಸ ಮುಗಿಸಿ ವಾಪಾಸ್​ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಬಸ್​ನಲ್ಲಿದ್ದ 50 ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮದ್ದೂರಿನ ಭಾರತೀನಗರದ ಸರ್ಕಾರಿ ಆಸ್ಙತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಗುರುತು ಇನ್ನು ಪತ್ತೆಯಾಗಿಲ್ಲ. ಸದ್ಯ ಘಟನೆ ಸಂಬಂಧ ಕೆ.ಎಂ ದೊಡ್ಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!