500 ಕೋಟಿ ರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ. ಸುಧಾ ಅವರನ್ನು ಸರ್ಕಾರ ಅಮಾನತ್ತು ಮಾಡಿದೆ.
ಕೊನೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡ ವಾಗಿದೆ.
ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪ ದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಡಾ. ಸುಧಾ ಹೊತ್ತಿದ್ದಾರೆ
ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್ನಿಂದ ಖಚಿತ ಮಾಹಿತಿ ದೊರಕಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು