January 6, 2025

Newsnap Kannada

The World at your finger tips!

sunil kumar

500 ವಿದ್ಯುತ್ ರೀಚಾರ್ಜ್ ಕೇಂದ್ರ ಸ್ಥಾಪನೆಗೆ ಚಿಂತನೆ: ಇಂಧನ ಸಚಿವ ಸುನಿಲ್‌ಕುಮಾರ್

Spread the love

ವಿದ್ಯುತ್ ಚಾಲಿತ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 500 ರೀಚಾರ್ಜ್ ಕೇಂದ್ರಗಳನ್ನು ತೆರೆಯಲು ಚಿಂತಿಸಲಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಇಂತಹ ಕೇಂದ್ರಗಳನ್ನು ಆರಂಭಿಸಲಾಗು ವುದು ಎಂದು ಸಚಿವರು ಕಲಬುರಗಿಯಲ್ಲಿ ನಡೆದ ಜೆಸ್ಕಾಂ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ತಿಳಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಯಾಗ ಬೇಕು. ಅದು ದಾಖಲೆಯಲ್ಲಿರ ಬಾರದು. ಕಾರ್ಯರೂಪದಲ್ಲಿರ ಬೇಕು. ಗಂಗಾ ಕಲ್ಯಾಣ ಯೋಜನೆಯಡಿ ನೋಂದಾಯಿತ ಫಲಾನಿಭವಿ ರೈತರ ಪಂಪ್‌ಸೆಟ್‌ಗಳಿಗೆ 30 ದಿನಗಳಲ್ಲಿ ವಿದ್ಯುತ್ ನೀಡಬೇಕು. ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿ ಸುವುದು ಸವಾಲಾಗಿದೆ. ಮನೆಗಳಿಗೆ ವಿದ್ಯುತ್ ಪೂರೈಕೆಗೆ ವೈಜ್ಞಾನಿಕ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ಸೂಚಿಸಿದರು.

ಕುಡಿಯುವ ನೀರಿನ ಉದ್ದೇಶಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿದ್ಯುತ್ ಸಂಪರ್ಕ ಕೋರುವ ಪ್ರಸ್ತಾವನೆಗಳಿಗೆ ಆಯಾ ವರ್ಷದ ಬೇಸಿಗೆಯಲ್ಲಿ ಸಮಸ್ಯೆಯಾಗದಂತೆ ಜನವರಿಯಲ್ಲೇ ಸಂಪರ್ಕ ಕೊಡಬೇಕು. ಗ್ರಾಮೀಣ ಪ್ರದೇಶದಲ್ಲಿ ಕೆಟ್ಟುಹೋದ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗಳನ್ನು 24 ತಾಸಿನಲ್ಲಿ ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.

ಸೆಪ್ಟೆಂಬರ್ 24 ರ ನಂತರ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುವುದಾಗಿ ಇಂಧನ ಸಚಿವರು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!