November 16, 2024

Newsnap Kannada

The World at your finger tips!

subinspector

ಐದು ವರ್ಷದಲ್ಲಿ 500 ಪೊಲೀಸ್ ಠಾಣೆ ಆರಂಭದ ಗುರಿ: ಸಿಎಂ ಬೊಮ್ಮಾಯಿ

Spread the love

ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 500 ಪೊಲೀಸ್ ಠಾಣೆಗಳನ್ನು ಆರಂಭಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಈ ಗುರಿಯ ಸಾಕಾರಕ್ಕೆ ಪ್ರತಿವರ್ಷ 100 ಪೊಲೀಸ್ ಠಾಣೆ ಆರಂಭಿಸಲಾಗುವುದು. ಠಾಣೆಗಳಿಗೆ ಮೂಲಸೌಕರ್ಯ ಕಲ್ಪಿಸಿ ಸುಧಾರಣೆ ಮಾಡಬೇಕಾಗಿದೆ. ಹಾಗೆಯೇ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸುವ ಆಶಯವಿದೆ. 16 ಸಾವಿರ ಪೊಲೀಸ್ ಪೇದೆ ಮತ್ತು ಸಬ್‌ಇನ್ಸ್ಪೆಕ್ಟರ್‌ಗಳ ನೇಮಕ ಮಾಡಲಾಗುತ್ತಿದೆ.


ಆಫೀಸರ್ ಆನ್ ಕ್ರೈಂ ಸೀನ್ ಎಂಬ ಕಲ್ಪನೆ ಆಧಾರದಲ್ಲಿ ರಾಜ್ಯದಲ್ಲಿ ಪ್ರಪ್ರಥಮವಾಗಿ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಶ್ವಾನಗಳ ತರಬೇತಿಗೆ ಡಾಗ್ ಕ್ಯಾನಲ್ ಕೇಂದ್ರಗಳನ್ನು, ಆರು ಪ್ರಮುಖ ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ವಿವರಿಸಿದರು.


ಹುಬ್ಬಳ್ಳಿಯಲ್ಲಿ ಸೋಮವಾರ ಪೊಲೀಸ್ ಇಲಾಖೆಗೆ ಸಂಬAಧಿಸಿದ ಹಲವು ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಡಿವೈಎಸ್‌ಪಿ ಮತ್ತು ಮೇಲಿನ ಹಂತದ ಅಧಿಕಾರಿಗಳು ಕೇವಲ ಕಚೇರಿ ಮತ್ತು ಆಡಳಿತ ಕೆಲಸಗಳಿಗೆ ಮಹತ್ವ ನೀಡದೆ ಪ್ರತಿಯೊಂದು ಠಾಣೆಗೂ ಭೇಟಿ ನೀಡಿ ಮೂಲ ಪೊಲೀಸ್ ವೃತ್ತಿ ಮಾಡಬೇಕು. ಎಲ್ಲರೂ ಕ್ಷೇತ್ರಕ್ಕಿಳಿದು ಕರ್ತವ್ಯ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.


ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಮತ್ತಿತರ ಪ್ರಮುಖರು, ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಇದ್ದರು.

Copyright © All rights reserved Newsnap | Newsever by AF themes.
error: Content is protected !!