February 21, 2026

Newsnap Kannada

The World at your finger tips!

kaviraj

50:50 ರೂಲ್ಸ್​​ಗಳೆಲ್ಲಾ ಹಾಸ್ಯಾಸ್ಪದ -ಲಾಕ್​ಡೌನ್​​ ವಿರುದ್ಧ ಕಿಡಿಕಾರಿದ ಚಿತ್ರ ಸಾಹಿತಿ ಕವಿರಾಜ್

Spread the love

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ 50:50 ರೂಲ್ಸ್​​ಗಳೆಲ್ಲಾ ಹಾಸ್ಯಾಸ್ಪದ ಎಂದಿರುವ ಚಿತ್ರ ಸಾಹಿತಿ ಕವಿರಾಜ್ ಲಾಕ್​ಡೌನ್​​ ಹಿನ್ನೆಲೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕನ್ನಡ ಚಿತ್ರ ಸಾಹಿತಿ ಕವಿರಾಜ್ ‘’ಲಾಕ್‌ ಡೌನ್ ಕೊನೆಯ ಆಯ್ಕೆಯಾಗಿರಲಿ’’ ಎಂದು ಫೇಸ್ ಬುಕ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈಗಾಗಲೇ ಲಾಕ್ ಡೌನ್ ಹೊಡೆತಕ್ಕೆ ಸಿಲುಕಿ ಬಡ ಮತ್ತು ಮಧ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಜರ್ಜರಿತವಾಗಿದೆ. ಹೇಗೋ ಒದ್ದಾಡಿ ಚಿಗುರುತ್ತಿರುವ ಹೊತ್ತಿಗೆ ಮತ್ತೆ ಲಾಕ್ ಡೌನ್ ಹೇರಿದರೆ ಅವರ ಬದುಕು ಇನ್ನಷ್ಟು ದುಸ್ತರವಾಗಲಿದೆ ಎಂದು ಹೇಳಿದ್ದಾರೆ.
ನಿಮ್ಮ ಅವಾಂತರ, ಅವಿವೇಕತನ, ಅಸಮರ್ಥತೆಗಳಿಗೆ ಜನರನ್ನು ಹೊಣೆಗಾರರಾಗಿಸಿ, ಇನ್ನಷ್ಟು ಸಂಕಷ್ಟಕ್ಕೆ ದೂಡಬೇಡಿ. ಪರಿಣಾಮಕಾರಿ ಮುನ್ನೆಚ್ಚರಿಕೆ, ನಿಯಂತ್ರಣ ಕ್ರಮಗಳನ್ನು ಬಿಗಿಯಾಗಿ ಜಾರಿಗೊಳಿಸಿ ಸಾಧ್ಯವಾದಷ್ಟು ಸಹಜ ಜನಜೀವನಕ್ಕೆ ಅನುವು ಮಾಡಿಕೊಡಿ ಎಂದಿದ್ದಾರೆ

ತೀರಾ ಕಡಿಮೆ ಜನ ಓಡಾಡುವ ನೈಟ್ ಹೊತ್ತಲ್ಲಿ ಕರ್ಫ್ಯೂ, ಒಂದು ಸೀಟ್ ಗ್ಯಾಪ್ ಬಿಟ್ಟು ಕುಳಿತ ಕೂಡಲೇ ಕೊರೊನಾ ಬರುವುದಿಲ್ಲವೇನೋ ಎನ್ನುವಂತಿರುವ 50:50 ರೂಲ್ಸ್ ಗಳೆಲ್ಲ ಒಂದು ರೀತಿ ಹಾಸ್ಯಾಸ್ಪದ ರೂಲ್ಸ್ ಗಳೇ ಎಂದು ಹೇಳಿದ್ದಾರೆ.

ಎಲ್ಲರೂ ವ್ಯಾಕ್ಸಿನ್ ಹಾಕಿಸುವ ವ್ಯವಸ್ಥೆ ಆಗಲಿ. ಜೊತೆಗೆ ಮಾಸ್ಕ್, ಸಾಮಾಜಿಕ ಅಂತರ, ಪ್ರವೇಶಕ್ಕೆ ಮುನ್ನ ಸ್ಯಾನಿಟೈಸೇಷನ್ ಕಡ್ಡಾಯವಾಗಲಿ. ಲಾಕ್ ಡೌನ್ ಕೊನೆಯ ಆಯ್ಕೆಯಾಗಿರಲಿ..’’ ಎಂದು ಫೇಸ್‌ಬುಕ್‌ನಲ್ಲಿ ನಿರ್ದೇಶಕ ಕವಿರಾಜ್ ನೊಂದು ಪೋಸ್ಟ್ ಹಾಕಿದ್ದಾರೆ.

error: Content is protected !!