ಗ್ಯಾರಂಟಿ ಯೋಜನೆಗಳಿಗೆ ಮುಂದಿನ ವರ್ಷ 52,009 ಕೋಟಿ ರೂ. ಮೀಸಲು : ಸಿದ್ದರಾಮಯ್ಯ

Team Newsnap
1 Min Read

ಬೆಂಗಳೂರು : ಕಾನೂನು ರೀತಿ ಶ್ರೀಮಂತರಿಂದ ತೆರಿಗೆಯನ್ನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಉತ್ತಮ ಅರ್ಥಶಾಸ್ತ್ರ. ಮುಂದಿನ ವರ್ಷಕ್ಕೆ ಗ್ಯಾರಂಟಿಗಳಿಗೆ ರೂ.52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ,ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ್ದು, 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11,495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ ಸರ್ಕಾರಕ್ಕೆ ತಿಳಿಸಿದ್ದೆ.

2023-24 ರಲ್ಲಿ ಕೇಂದ್ರದ ಬಜೆಟ್ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ. ನೀಡಲಾಗುವುದು ಎಂದು ಹೇಳಿ ಅದಕ್ಕೆ ಯಾವುದೇ ಷರತ್ತುಗಳನ್ನು ಆಗ ಉಲ್ಲೇಖಿಸಿರಲಿಲ್ಲ ಮತ್ತು . ಆ ಸಾಲಿನ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಯಾಗಿದ್ದ Basavaraj Bommai ರವರು ಉಲ್ಲೇಖಿಸಿದ್ದಾರೆ.

ಆದರೆ ಈ ವರೆಗೂ ಒಂದು ರೂಪಾಯಿ ಬಂದಿಲ್ಲ. ಹೀಗಾಗಿ ಕೇಂದ್ರ ಬಿಜೆಪಿ (BJP) ಸರ್ಕಾರದಿಂದ ರೂ.5,300 ಕೋಟಿ ಸಹಾಯಧನವನ್ನು ಬೊಮ್ಮಾಯಿಯವರು ಕೊಡಿಸಲಿ ಎಂದರು.

ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ.50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ. ಈ ಅನ್ಯಾಯಗಳ ಬಗ್ಗೆ ಸಂಸದರು ಮಾತನಾಡುತ್ತಿಲ್ಲ ಎಂದು ಹೇಳಿದರು.

ಬಡವರು, ದಲಿತರು, ಅಲ್ಪಸಂಖ್ಯಾತರು ಹೀಗೆ ಧರ್ಮ ಜಾತಿ ಬೇಧವಿಲ್ಲದೇ ನಮ್ಮ ಗ್ಯಾರಂಟಿಗಳು ಜನ ಸಾಮಾನ್ಯರು ಮತ್ತು ಫಲಾನುಭವಿಗಳಿಗೆ ತಲುಪಿವೆ. ಅವರಿಗೆ ಆರ್ಥಿಕ – ಸಾಮಾಜಿಕ ಬಲವನ್ನು ತುಂಬಲಾಗಿದೆ.ಗಂಡು ಮಗುವಿಗೆ ಜನ್ಮ ನೀಡಿದ ವಿರಾಟ್ ಅನುಷ್ಕಾ ದಂಪತಿ

ಮನುವಾದದಲ್ಲಿ ನಾವು ನಂಬಿಕೆ ಇಟ್ಟಿಲ್ಲ, ಸಂವಿಧಾನದಲ್ಲಿ ನಂಬಿಕೆಯಿಟ್ಟಿರುವವರು. ಸರ್ವಜನಾಂಗದ ಶಾಂತಿಯ ತೋಟ ಎಂಬ ಮಾತಲ್ಲಿ ನಾವು ನಂಬಿಕೆಯಿರಿಸಿದ್ದೇವೆ. ಅದ್ದರಿಂದ ಎಲ್ಲ ವರ್ಗಗಳಿಗೆ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

Share This Article
Leave a comment