ಬೆಂಗಳೂರು: ಶಕ್ತಿ ಯೋಜನೆಗೆ 2025-26ನೇ ಸಾಲಿನಲ್ಲಿ 5,300 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಅವರು, ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆಗೆ ಶಕ್ತಿ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತಿದ್ದು, ಇದುವರೆಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಇದರ ಸೌಲಭ್ಯವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. 2024-25ನೇ ಸಾಲಿನಲ್ಲಿ ಈ ಯೋಜನೆಗಾಗಿ 5,015 ಕೋಟಿ ರೂ. ವೆಚ್ಚ ಮಾಡಲಾಗಿತ್ತು, 2025-26ನೇ ಸಾಲಿನಲ್ಲಿ ಇದನ್ನು 5,300 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
ಪ್ರಾಜೆಕ್ಟ್ ಮೆಜೆಸ್ಟಿಕ್: ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ.
ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ: ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಹೊನ್ನಾವರ, ಚಾಮರಾಜನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹೊಸ ಪರೀಕ್ಷಾ ಪಥ ನಿರ್ಮಾಣಕ್ಕೆ ಕ್ರಮ.
ಡಿಜಿಟಲೀಕರಣ: ಸಾರಿಗೆ ಇಲಾಖೆಯ ಅಧೀನ ಕಛೇರಿಗಳ ದಾಖಲೆಗಳನ್ನು ಹಂತ ಹಂತವಾಗಿ ಡಿಜಿಟಲೀಕರಣಗೊಳಿಸಲಾಗುವುದು. ಈ ಯೋಜನೆಗಾಗಿ 25 ಕೋಟಿ ರೂ. ಅನುದಾನ ಮೀಸಲಾಗಿದೆ.
ಸಂಚಾರ ನಿಯಂತ್ರಣ: ರಾಜ್ಯದ ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಸಲು ನಿರ್ಧಾರ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು