ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ.
ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು , ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ ಎಂದು ಸ್ಪಷ್ಟಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ವ್ಯಯಿಸಲಾಗಿದೆ. ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಂತೋಷ್ ಲಾಡ್ ಮಾತನಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿರ್ದೇಶನದಂತೆ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.
ಈಗಾಗಲೇ ರಾಜ್ಯ ಸರ್ಕಾರದಿಂದ 26 ಲಕ್ಷ ರೈತರ ಖಾತೆಗೆ 2000 ರೂ. ನಂತೆ ಬರ ಪರಿಹಾರ ಹಣ ವರ್ಗಾವಣೆ ಮಾಡಲಾಗಿದೆ . ಇನ್ನುಳಿದಿರುವ 3 ರಿಂದ 4 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರಕ್ಕೆ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ಕೂಡಲೆ ಕೇಂದ್ರದಿಂದ ಶೇ.88 ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರದಿಂದ ಶೇ.12 ರಷ್ಟು ಅನುದಾನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲೆಯಲ್ಲಿ ಅಪೇರಲ್ ಪಾರ್ಕ್, ಜೀನ್ಸ್ ಪಾರ್ಕ್ ನಿರ್ಮಾಣ ಕುರಿತು, ಮಾನ್ಯ ಮುಖ್ಯಮಂತ್ರಿಗಳಿಗೆ ಗಮನ ಸೆಳೆದಿದ್ದಾರೆ .ಕೆಲ ಕುಟುಂಬಗಳು ‘ಗ್ಯಾರಂಟಿ ಯೋಜನೆ’ಗಳಿಂದ ಬೀದಿಪಾಲಾಗುತ್ತಿವೆ : HDK
ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ