Karnataka

‘ಗ್ಯಾರಂಟಿ ಯೋಜನೆ’ಗಳಿಗೆ ರಾಜ್ಯ ಸರ್ಕಾರದಿಂದ 58,000 ಕೋಟಿ ರೂ ವ್ಯಯ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ.

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು , ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ ಎಂದು ಸ್ಪಷ್ಟಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ವ್ಯಯಿಸಲಾಗಿದೆ. ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಂತೋಷ್ ಲಾಡ್ ಮಾತನಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿರ್ದೇಶನದಂತೆ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.

ಈಗಾಗಲೇ ರಾಜ್ಯ ಸರ್ಕಾರದಿಂದ 26 ಲಕ್ಷ ರೈತರ ಖಾತೆಗೆ 2000 ರೂ. ನಂತೆ ಬರ ಪರಿಹಾರ ಹಣ ವರ್ಗಾವಣೆ ಮಾಡಲಾಗಿದೆ . ಇನ್ನುಳಿದಿರುವ 3 ರಿಂದ 4 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರಕ್ಕೆ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ಕೂಡಲೆ ಕೇಂದ್ರದಿಂದ ಶೇ.88 ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರದಿಂದ ಶೇ.12 ರಷ್ಟು ಅನುದಾನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲೆಯಲ್ಲಿ ಅಪೇರಲ್ ಪಾರ್ಕ್, ಜೀನ್ಸ್ ಪಾರ್ಕ್ ನಿರ್ಮಾಣ ಕುರಿತು, ಮಾನ್ಯ ಮುಖ್ಯಮಂತ್ರಿಗಳಿಗೆ ಗಮನ ಸೆಳೆದಿದ್ದಾರೆ .ಕೆಲ ಕುಟುಂಬಗಳು ‘ಗ್ಯಾರಂಟಿ ಯೋಜನೆ’ಗಳಿಂದ ಬೀದಿಪಾಲಾಗುತ್ತಿವೆ : HDK 

ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Team Newsnap
Leave a Comment

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024