ಇದನ್ನು ಓದಿ –2 ದಿನಗಳಿಂದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ 500 ರು ಇಳಿಕೆ
ಭೂಕಂಪದಿಂದಾಗಿ ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಸುನಾಮಿ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ಇರುವ ಟಿಮೋರ್ ದ್ವೀಪದ ಪೂರ್ವದಲ್ಲಿ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದರ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ಟಿಮೋರ್ ಪೆಸಿಫಿಕ್ ರಿಂಗ್ ಆಫ್ ಫೈರ್ ನಲ್ಲಿದೆ. ಇದು ಆಗಾಗ ಭೂಕಂಪಗಳಿಗೆ ಗುರಿಯಾಗುತ್ತದೆ.
ಫೆಬ್ರವರಿಯಲ್ಲಿ ಇಂಡೋನೇಷ್ಯಾದ ಉತ್ತರ ಸುಮಾತ್ರದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿ 12 ಜನ ಸಾವನ್ನಪ್ಪಿದರು. 2004 ರಲ್ಲಿ 9.1 ತೀವ್ರತೆಯ ಭೂಕಂಪದಿಂದ ಸುನಾಮಿ ಉಂಟಾಗಿ ಸುಮಾತ್ರಾ ತೀರವನ್ನು ಅಪ್ಪಳಿಸಿ ಇಂಡೋನೇಷ್ಯಾದಲ್ಲಿ ಸುಮಾರು 1,70,000 ಸೇರಿದಂತೆ ಈ ಪ್ರದೇಶದಾದ್ಯಂತ 2,20,000 ಜನ ಸಾವಿಗೀಡಾಗಿದ್ದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ