ನಿಯಮ ಉಲ್ಲಂಘಣೆ ಮಾಡಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ಗಳನ್ನು ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಜರುಗಿದೆ. ಲಾರಿ ಮತ್ತು ಬೊಲೆರೊ ಪಿಕ್‍ಅಪ್ ವಾಹನದಲ್ಲಿ ನಿಯಮ ಉಲ್ಲಂಘಿಸಿ, ನಿರ್ಲಕ್ಷ್ಯತನದಿಂದ ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾಕತಿ ಠಾಣೆ ಪೊಲೀಸರು ದಾಳಿ ಮಾಡಿದ್ದರು.
ಲಾರಿಯಲ್ಲಿ ತುಂಬಿದ್ದ ಅಂದಾಜು ನಾಲ್ಕು ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ತಾಲೂಕಿನ ಹೊನಗಾ ಗ್ರಾಮದ ದಾಬಾ ಬಳಿ ಲಾರಿ ಮತ್ತು ಬೊಲೆರೊ ಪಿಕ್‍ಅಪ್ ಬರುತ್ತಿದ್ದಂತೆ ತಪಾಸಣೆಗಿಳಿದ ಪೊಲೀಸರು ಜಿಲೆಟಿನ್ ಕಡ್ಡಿ ಮತ್ತು ಡಿಟೋನೇಟರ್ ಗಳ ಬಾಕ್ಸ್ ಗಳನ್ನು ನೋಡಿ ಪೋಲಿಸರಿಗೆ ಆಶ್ಚರ್ಯ ವಾಗಿದೆ.
ಈ ಎಲ್ಲಾ ಸ್ಫೋಟಕಗಳು ಕರೋಶಿ ಗ್ರಾಮದಿಂದ ಧಾರವಾಡ, ಗದಗ ಜಿಲ್ಲೆಗಳಿಗೆ ಸಾಗಿಸಲಾಗುತ್ತಿತ್ತು.
ಈ ದಾಳಿ ವೇಳೆ ವಾಹನದಲ್ಲಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡ ಗ್ರಾಮದ ರಮೇಶ್ ಲಕ್ಕೊಟಿ, ರಾಜು ಶಿರಗಾವಿ, ಮುಗಳಿ ಗ್ರಾಮದ ಅರುಣ ಮಠದ, ವಿನಯ್ ಕಿನ್ನವರ್ ಅವರನ್ನು ಬಂಧಿಸಿ.
ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ