ನಾನು ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ವನ್ನು ಮೃತ ಹರ್ಷ ಕುಟುಂಬಕ್ಕೆ ಕೊಟ್ಟು ಬರುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಪ್ರತಿಮ ದೇಶಭಕ್ತನ ಕೊಲೆಯಾಗಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ರಾಜ್ಯದಲ್ಲಿ ಮತ್ತು ದೇಶದಲ್ಲಿ ನಮ್ಮದೇ ಸರ್ಕಾರವಿದೆ. ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಬೇಕು. ಹರ್ಷನ ಕುಟುಂಬಕ್ಕೆ ನಾನು ವೈಯಕ್ತಕವಾಗಿ 2 ಲಕ್ಷ ರೂ. ಕೊಟ್ಟಿದ್ದೇನೆ ಎಂದರು.
ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎನ್‍ಕೌಂಟರ್ ಮಾಡಬೇಕು. ಅವರ ಕುಟುಂಬದ ಕಣ್ಣೀರನ್ನು ನೋಡಲು ಆಗುತ್ತಿಲ್ಲ. ಅವನಿಗೆ ಇಬ್ಬರು ಸಹೋದರಿಯರಿದ್ದಾರೆ. ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ಕೊಟ್ಟು ಬರುತ್ತೇನೆ ಎಂದು ತಿಳಿಸಿದ್ದಾರೆ.
ಮೃತ ಹರ್ಷನ ದೇಹದಲ್ಲಿ ನಮ್ಮದೇ ಹಿಂದೂ ರಕ್ತ ಹರಿಯುತ್ತಿತ್ತು. ಎಲ್ಲ ಮುಸ್ಲಿಮರು ಭಯೋತ್ಪಾದಕರಲ್ಲ. ಘಟನೆಗೆ ಸಂಬಂಧಿಸಿದಂತೆ ನಾನು ಮುಸ್ಲಿಮರ ಬಗ್ಗೆ ಮಾತನಾಡುವುದಿಲ್ಲ. ನಮ್ಮ ಮೃದುಧೋರಣೆ ತೋರಿದ್ದೇವೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ