ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 1ವರ್ಷದ ಮಗವೂ ಸೇರಿ ಒಂದೇ ಕುಟುಂಬದ 6 ಮಂದಿ ದುರಂತ ಸಾವು ಕಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಈ ದುರಂತದಲ್ಲಿ ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.
ಮೃತ ದುರ್ದೈವಿಗಳನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಹಾಗೂ ಉಮೇಜಾ ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ (ಚೌಲ)ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹ್ಮದ್ ಪಾಜೀಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಘಡ ನಡೆದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಭಾರೀ ಮಳೆ- ನಾಳೆ ಮಂಡ್ಯ, ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನ ಶಾಲೆಗಳಿಗೆ ರಜೆ
ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ