ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮತ್ತೆ ಸಿಎಟಿ ನವೆಂಬರ್ 23 ಕ್ಕೆ ಮುಂದೂಡಿದೆ.
ಇಂದು ವಿಚಾರಣೆ ನಡೆಸಿದ ಸಿಎಟಿ ವಾದ ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ನವೆಂಬರ್ 23 ಕ್ಕೆ ಮುಂದೂಡಿದೆ. ಡಿ.ಸಿ ರೋಹಿಣಿ ಸಿಂಧೂರಿಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ಅವಧಿಗೂ ಮುನ್ನವೇ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಈ ಹಿಂದೆ ಅಕ್ಟೋಬರ್ 23, ನವೆಂಬರ್ 3 ಹಾಗೂ 10 ಕ್ಕೆ ಮುಂದೂಡಿತ್ತು.
ಅರ್ಜಿದಾರರ ಪರ ವಕೀಲ, ಎ.ಎಸ್.ಪೊನ್ನಣ್ಣ ವಾದ ಮಂಡನೆ ಬಳಿಕ ಪ್ರತಿವಾದ ಮಂಡಿಸಲು ಎಜಿ ಮತ್ತೆ ಕಾಲಾವಕಾಶ ಕೋರಿದರು .ಈ ಹಿನ್ನೆಲೆ ಸಿಎಟಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿತ್ತು. ಮತ್ತೆ ಮರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನವೆಂಬರ್ 3 ಕ್ಕೆ ಮುಂದೂಡಿಕೆಯಾಗಿತ್ತು. ಮತ್ತೆ ಮರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನವೆಂಬರ್ 10 ಕ್ಕೆ ಮುಂದೂಡಿತ್ತು. ಇದೀಗ ಆರನೇ ಬಾರಿಗೆ ನವೆಂಬರ್ 23 ಕ್ಕೆ ಮತ್ತೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು