ರಾಜ್ಯ ಬಜೆಟ್ 2023 – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಪ್ರತಿ ಗ್ರಾಮ ಪಂಚಾಯತ್‍ಗೆ 22 ರಿಂದ 60 ಲಕ್ಷ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು.
ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.
2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು. ಇದನ್ನು ಓದಿ – ಕೇಂದ್ರ ಸರ್ಕಾರಿ ನೌಕರರಿಗೆ ಮಾರ್ಚ್ ನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳ!
ಗ್ರಾಮೀಣ ರಸ್ತೆ ಅಭಿವೃದ್ದಿಗೆ ಕ್ರಮ :
ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರವು ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರಸಕ್ತ ಸಾಲಿನಲ್ಲಿ 2,070 ಕೋಟಿ ರೂ. ಗಳ ವೆಚ್ಚದಲ್ಲಿ 4,504 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಓದಿ – 3 ಲಕ್ಷ 7 ಸಾವಿರ ಕೋಟಿ ರು. ಬಜೆಟ್ ಮಂಡನೆ :ರೈತರಿಗೆ 5 ಲಕ್ಷ ರು ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ
ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ, ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ. ವೆಚ್ಚ ಮಾಡಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ರಾಜ್ಯ ಬಜೆಟ್ 2023,


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು