ರಾಷ್ಟ್ರೀಯ ಹೆದ್ದಾರಿಯ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ರದ್ದು – ನಿತಿನ್‌ ಗಡ್ಕರಿ

Team Newsnap
1 Min Read

ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ.ಮೀ. ವ್ಯಾಪ್ತಿಯೊಳಗಡೆ ಸಂಚರಿಸುವವರಿಗೆ ಇನ್ಮುಂದೆ ಟೋಲ್‌ ತೆರಿಗೆ ನೀಡುವಂತಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಲೋಕ ಸಭೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಸಂಗ್ರಹ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಲೋಕಸಭೆಯಲ್ಲಿ ಸಚಿವರು ಘೋಷಿಸಿದ್ದಾರೆ.

ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷದ ಬಜೆಟ್‌ನ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆಯ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸುವಾಗ ಸಚಿವರು, ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯಲ್ಲಿ ಕೇವಲ ಒಂದು ಟೋಲ್ ಸಂಗ್ರಹವಿರುತ್ತದೆ ಎಂದು ತಿಳಿಸಿದ್ದಾರೆ.

Share This Article
Leave a comment