ನೂತನ‌ ಮುಖ್ಯಮಂತ್ರಿ ಘೋಷಣೆ ಬೆನ್ನಲ್ಲೇ ಕೇಂದ್ರದಿಂದ ರಾಜ್ಯಕ್ಕೆ 629.03 ಕೋಟಿ ಬಿಡುಗಡೆ

Team Newsnap
1 Min Read

ಪ್ರಕೃತಿ ವಿಕೋಪದ ಪರಿಹಾರವಾಗಿಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಂಗಳವಾರ 629.03 ಕೋಟಿ ರು ಅನುದಾನ ಬಿಡುಗಡೆ ಮಾಡಿದೆ.

ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಆಗ ಯಡಿಯೂರಪ್ಪನವರ ಮೇಲಿನ‌ ಮುನಿಸಿನಿಂದಾಗಿ ಹೆಚ್ಚಿನ ಅನುದಾನವನ್ನು ರಾಜ್ಯಕ್ಕೆ ಕೊಟ್ಟಿರಲಿಲ್ಲ.

ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನು ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಪರಿಹಾರವನ್ನು ನೀಡಲಾಗಿದೆ.

ಕರ್ನಾಟಕಕ್ಕೆ ಬರೋಬ್ಬರಿ 629.03 ಕೋಟಿ ರು ಹಣವನ್ನು ಬಿಡುಗಡೆ ಮಾಡಿದರೆ, ಮಹಾರಾಷ್ಟ್ರಕ್ಕೆ 701 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಎನ್​ಡಿಆರ್​ಎಫ್​ ನಡಿ ಒಟ್ಟು 133,003 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

Share This Article
Leave a comment