ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಚಿತ್ರದ ಬುರ್ಜ್ ಖಲೀಫಾದಲ್ಲಿ 3 ನಿಮಿಷದ ಲೇಸರ್ ಟೀಸರ್ ಗೆ ಬರೋಬರಿ
70 ಲಕ್ಷ ರು. ಖರ್ಚು ಮಾಡಲಾಗುತ್ತಿದೆ.
ದುಬೈನ ಬುರ್ಜ್ ಖಲೀಫಾದ ವಿಕ್ರಾಂತ್ ರೋಣಾನ ಟೀಸರ್ ರಾರಾಜಿಸಲಿದೆ.
ಕಿಚ್ಚ ಚಿತ್ರರಂಗಕ್ಕೆ ಎಂಟ್ರಿಕೊಟ್ಟು 25 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಕಿಚ್ಚನ ಬೆಳ್ಳಿ ಹಬ್ಬವನ್ನು ದುಬೈನಲ್ಲಿ ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
ವಿಕ್ರಾಂತ್ ರೋಣಾ ಸಿನಿಮ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣಾ. ಇದೇ ವೇಳೆ 3 ನಿಮಿಷಗಳ ಲೇಸರ್ ಟೀಸರ್ ಕೂಡ ಬಿಡುಗಡೆಯಾಗಲಿದೆ.
ಕಿಚ್ಚನ ಬೆಳ್ಳಿ ಹಬ್ಬದ ಆಚರಣೆ ಕಾರ್ಯಕ್ರಮವು ಬುರ್ಜ್ ಖಲೀಫಾದಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ.
ಬುರ್ಜ್ ಖಲೀಫಾದಲ್ಲಿ ಟೀಸರ್ ನ್ನು ಸುಮಾರು ಒಂದೂವರೆ ಕಿಲೋ ಮೀಟರ್ ದೂರದಿಂದಲೇ ಚಿತ್ರೀಕರಣ ಮಾಡಲಾಗುತ್ತಿದೆ. 6 ಕ್ಯಾಮರಾ ಯೂನಿಟ್ ಗಳನ್ನು ಬಳಕೆ ಮಾಡಲಾಗುತ್ತಿದೆ.
ಕಿಚ್ಚಿನ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಸುದೀಪ್ ಪತ್ನಿ ಪ್ರಿಯ ಹಾಗೂ ಪುತ್ರಿ ಭಾಗಿಯಾಗಲಿದ್ದಾರೆ.
ಕಿಚ್ಚನ ಬೆಳ್ಳಿ ಹಬ್ಬದ ಸಂಭ್ರಮವನ್ನು ಕಿಚ್ಚ ಅಭಿಮಾನಿಗಳಷ್ಟೇ ಅಲ್ಲದೇ ದುಬೈನಲ್ಲಿ ನೆಲೆಸಿರುವ ಕನ್ನಡಗಿಗರು ತುದಿಗಾಲಿನಲ್ಲಿ ನಿಂತಿದ್ದಾರೆ.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
More Stories
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ