December 22, 2024

Newsnap Kannada

The World at your finger tips!

modi

77ನೇ ಸ್ವಾತಂತ್ರ್ಯ ದಿನಾಚರಣೆ – ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Spread the love

ನವದೆಹಲಿಯ ಕೆಂಪು ಕೋಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು.

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.

ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿ, ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.

ದೇಶದ ಜನರನ್ನು ಉದ್ದೇಶಿಸಿ, ಭಾರತ ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ನೇತೃತ್ವ ವಹಿಸಲಿದೆ ಎಂದು ತಿಳಿಸಿದರು.

ಭವಿಷ್ಯದಲ್ಲಿ ಭಾರತ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ.

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಪಾರ ಪ್ರಗತಿ ಕಂಡಿದೆ ಯುವಕರ ಶಕ್ತಿ ಸಾಮರ್ಥ್ಯವನ್ನು ಉತ್ತಮ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ದೇಶ ಇಂದು ಕೃಷಿ ಕ್ಷೇತ್ರದಲ್ಲಿ ಅಗಾಧ ಬದಲಾವಣೆಯನ್ನು ಕಂಡಿದೆ ಜಾಗತಿಕ ಮಟ್ಟದಲ್ಲಿ ಭಾರತದ ಮೇಲಿನ ವಿಶ್ವಾಸ ಹೆಚ್ಚುತ್ತಿದೆ ಎಂದರು.

ದೇಶದ ಯುವಕರ ಶಕ್ತಿ ಮೇಲೆ ನನಗೆ ಅಗಾಧ ವಿಶ್ವಾಸವಿದೆ. ಭಾರತ ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ನೇತೃತ್ವ ವಹಿಸಲಿದೆ. ಕಳೆದ ವರ್ಷ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಭಾಗಿಯಾಗಿದ್ದೆ. ಭಾರತ ಅಭಿವೃದ್ಧಿ ಬಗ್ಗೆ ಹಲವು ರಾಷ್ಟ್ರಗಳ ನಾಯಕರು ಶ್ಲಾಘಿಸಿದರು.

ಜಾಗತಿಕ ಮಟ್ಟದಲ್ಲಿ ಸಣ್ಣ ಸಣ್ಣ ನಗರಗಳು ಬೆಳೆಯುತ್ತಿವೆ. ಈಗ ಭಾರತ ವಿಶ್ವದ ಮೂರನೇ ಅತಿ ದೊಡ್ಡ ಸ್ಟಾರ್ಟಪ್ ದೇಶವಾಗಿದೆ. ಇದರಿಂದ ನಮ್ಮ ಯುವಕರಿಗೆ ಹೊಸ ಅವಕಾಶ ಸಿಕ್ಕಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರದಲ್ಲಿ ಹೋರಾಟ ಮಾಡಿದ, ಬಲಿದಾನ ನೀಡಿದ ಎಲ್ಲ ಹೋರಾಟಗಾರಿಗೆ ಗೌರವ ಸಲ್ಲಿಸುತ್ತೇನೆ. ಇದು ಅಮೃತ ಕಾಲದ ಮೊದಲ ವರ್ಷ.

ಈ ಅವಧಿಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರ ದೇಶದ ಎಲ್ಲ ಜನರ ಹಿತಾಸಕ್ತಿ ಕಾಪಾಡಲಿದೆ.ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹನೀಯರ ಪಾತ್ರ

ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಸಮಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Copyright © All rights reserved Newsnap | Newsever by AF themes.
error: Content is protected !!