Karnataka

7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ

ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಬೇಡಿಕೆಯಂತೆ ಮೂವರು ಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.

ಆಯೋಗ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಪ್ರಶ್ನಾವಳಿಗಳನ್ನು ಬಿಡುಗಡೆ ಮಾಡಿದೆ.ರೆಪೊ ದರ ಮತ್ತೆ ಹೆಚ್ಚಿಸಿದ ಆರ್ ಬಿ ಐ : ಸಾಲದ ಕಂತು ಏರಿಕೆ

ಸರ್ಕಾರಿ ಆದೇಶದಲ್ಲಿ, ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ) ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳ ವೇತನ ರಚನೆಯನ್ನು ಪರಿಶೀಲಿಸಿ, ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲು, 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾದೆ.

ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ನಡೆಸಲು ಸರ್ಕಾರದ ವಿವಿಧ ಇಲಾಖೆಗಳು/ ಸ್ಥಳೀಯ ಸಂಸ್ಥೆಗಳು/ನಿಗಮ/ಮಂಡಳಿಗಳು ಹಾಗೂ ರಾಜ್ಯ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳಿಂದ ಮಾಹಿತಿಗಳು ಮತ್ತು ದಸ್ತಾವೇಜುಗಳನ್ನು ಪರಿಶೀಲಿಸುವ ಅವಶ್ಯಕತೆ ಇರುತ್ತದೆ. ಪರಿಶೀಲನಾರ್ಹ ಅಂಶಗಳ ಕುರಿತಂತೆ, ಆಯೋಗವು ಬಯಸುವ ವಿಷಯ ಮತ್ತು ಅಧಿಕೃತ ಮಾಹಿತಿಗಳ ಬಗ್ಗೆ ಸೂಕ್ತ ದಾಖಲೆ/ಮಾಹಿತಿಗಳನ್ನು ಪಡೆಯಲು ಆಯೋಗವು ಸರ್ಕಾರಿ ನೌಕರರು/ಪರಿಣಿತರು/ ಸಾರ್ವಜನಿಕರನ್ನು ಆಹ್ವಾನಿಸಿ ಅಧ್ಯಯನ ನಡೆಸಬೇಕಾಗಿರುತ್ತದೆ. ತನ್ನ ಕಾರ್ಯ ವ್ಯಾಪ್ತಿಯ ಪರಿಶೀಲನಾಂಶಗಳ, ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಮತ್ತು ಸರ್ಕಾರದ ಇತರ ಅಧಿಕಾರಿಗಳ ಅಭಿಪ್ರಾಯಗಳನ್ನು ಸಹ ಆಯೋಗವು ಕೋರಬಹುದಾಗಿರುತ್ತದೆ.

ಆದ್ದರಿಂದ, ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಆಯೋಗಕ್ಕೆ ಉತ್ತರಗಳನ್ನು ಸಲ್ಲಿಸುವ ಸಂಬಂಧದಲ್ಲಿ ಒಂದು ನಿರ್ದಿಷ್ಟ ಕಾರ್ಯವಿಧಾನವನ್ನು ಅನುಸರಿಸುವಂತೆ ಸೂಚನೆಗಳನ್ನು ನೀಡುವುದು ಅಗತ್ಯವೆಂದು ಪರಿಗಣಿಸಲಾಗಿದೆ.

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024