January 10, 2025

Newsnap Kannada

The World at your finger tips!

vidhana soudha

ಮಧ್ಯಂತರ ವರದಿ ಬಂದ ತಕ್ಷಣವೇ ನೌಕರರಿಗೆ 7 ನೇ ವೇತನ ಆಯೋಗ ಜಾರಿ : ಸಿಎಂ ಬೊಮ್ಮಾಯಿ

Spread the love

ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ವರದಿ ಸಿದ್ದವಾಗುತ್ತಿದೆ, ಮಧ್ಯಂತರ ವರದಿ ಬಂದ ಕೂಡಲೇ ಅನುಷ್ಠಾನಗೊಳಿಸಲಾಗವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ನೇ ವೇತನಾ ವರದಿಯನ್ನು 2023-24 ನೇ ಸಾಲಿನಲ್ಲೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ ಈಗಾಗಲೇ 7 ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ ವೇ: ಟೋಲ್‌ ವಸೂಲಿ ಮುಂದೂಡಿಕೆ

ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ

Copyright © All rights reserved Newsnap | Newsever by AF themes.
error: Content is protected !!