ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್

Team Newsnap
1 Min Read

ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.  

ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್‌, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈ ಶಂಕರ್, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಇಂದು ಬೆಳಿಗ್ಗೆ ಭೇಟಿಯಾದೆ.  ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಸರ್ಕಾರ ಎಲ್ಲಾ ಪ್ರಯತ್ನ  ಮುಂದುವರಿಸುತ್ತದೆ. ಈ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. 

ಮರಣದಂಡನೆಗೆ ಗುರಿಯಾದ ಎಂಟೂ ಮಂದಿ ಅಲ್ ದಹ್ರಾ ಕಂಪನಿಯ ನೌಕರರಾಗಿದ್ದರು. ಕಳೆದ ವರ್ಷದ ಆಗಸ್ಟ್‌ನಲ್ಲಿ ಇವರನ್ನು ಶಂಕಿತ ಬೇಹುಗಾರಿಕೆ ಆರೋಪದ ಅಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಇವರ ಮೇಲಿನ ಆರೋಪಗಳು ಏನಿದ್ದವು ಎಂಬುದನ್ನು ಕತಾರ್‌ ಬಹಿರಂಗಪಡಿಸಿಲ್ಲ.

Share This Article
Leave a comment