ಗೃಹಜ್ಯೋತಿಗೆ 8 ಲಕ್ಷ ನೋಂದಣಿ

Newsnap Team
1 Min Read
8 lakh registration for Gruha Jyoti ಗೃಹಜ್ಯೋತಿಗೆ 8 ಲಕ್ಷ ನೋಂದಣಿ

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಜೂನ್ 20ರ ಹೊತ್ತಿಗೆ ಒಟ್ಟು 8,16,631 ಗ್ರಾಹಕರು ನೋಂದಾಯಿಸಿದ್ದಾರೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಿದ್ದರು. ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಎರಡನೇ ದಿನ 3,34,845ಕ್ಕೆ ಏರಿದೆ. ಜೂನ್ 20ರಂದು 3,85,481 ನೋಂದಣಿ ಆಗಿದೆ. ಮೂರನೇ ದಿನ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಜೂನ್ 18ರಿಂದ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿ ನಡೆಯುತ್ತಿದೆ. ಒಟ್ಟು 8,16,631 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‍ವರೆಗೆ ಉಚಿತ ವಿದ್ಯುತ್ ಪಡೆಯಬಹುದು.ದಕ್ಷಿಣ ಕಾಶಿ ನಂಜನಗೂಡಿಗೆ ನಟ ಯಶ್ ದಂಪತಿ ಭೇಟಿ

ದಾಖಲೆಗಳು: ನೋಂದಣಿ ಪ್ರಕ್ರಿಯೆಯು ತುಂಬಾ ಸರಳವಾಗಿದೆ. ಸೇವಾಸಿಂಧು ಪೆÇೀರ್ಟಲ್‍ನಲ್ಲಿ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ನಮೂದಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವು ವಿಧಿಸಲಾಗಿಲ್ಲ. ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Share This Article
Leave a comment