Main News

18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್

ವೈಮಾನಿಕ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.

ಸಂಸ್ಥೆಯ ವಿಮಾನಗಳಲ್ಲಿ 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನೊಟೀಸ್ ನೀಡಲಾಗಿದೆ

ಏರ್ ಕ್ರಾಪ್ಟ್ ನಿಯಮಗಳ ರೂಲ್ 134 ಹಾಗೂ ಷೆಡ್ಯೂಲ್ XI, 1937 ರ ಪ್ರಕಾರ ಸುರಕ್ಷಿತ, ಸಮರ್ಥ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ಸ್ಥಾಪಿಸುವುದಕ್ಕೆ ಸ್ಪೈಸ್ ಜೆಟ್ ವಿಫಲವಾಗಿದೆ ಎಂದು ಡಿಜಿಸಿಎ ನೀಡಿರುವ ನೊಟೀಸ್ ನಲ್ಲಿ ಹೇಳಿದೆ. ಇದನ್ನು ಓದಿ – ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ

ಘಟನೆಯ ಪರಿಶೀಲನೆ ಮೂಲಕ ಆಂತರಿಕ ಸುರಕ್ಷತೆ ಕಳಪೆಯಾಗಿರುವುದು ಹಾಗೂ ಅಸಮರ್ಪಕ ನಿರ್ವಹಣೆ ಕ್ರಮಗಳನ್ನು ತೋರುತ್ತಿದೆ ಎಂದು ಡಿಜಿಸಿಎ ಹೇಳಿದೆ.

ನೊಟೀಸ್ ಗೆ ಪ್ರತಿಕ್ರಿಯೆ ನೀಡುವುದಕ್ಕೆ ವಿಮಾನ ಸಂಸ್ಥೆಗೆ ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್‌ಸಿಪಿ ಸಿಂಗ್ ರಾಜೀನಾಮೆ

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್‌ಸಿಪಿ ಸಿಂಗ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ

ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್‌ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ

ಹಿಂದಿನ ದಿನ, ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಕ್ಯಾಬಿನೆಟ್ ಸಭೆಯಲ್ಲಿ ನಖ್ವಿ ಮತ್ತು ಸಿಂಗ್ ಇಬ್ಬರನ್ನೂ ಶ್ಲಾಘಿಸಿದರು, ಇದು ಅವರ ಅಂತಿಮ ಕ್ಯಾಬಿನೆಟ್ ಸಭೆಯಾಗಿದೆ

ರಾಜ್ಯಸಭಾ ಸಂಸದರಾಗಿ ತಮ್ಮ ಅವಧಿ ಗುರುವಾರ ಕೊನೆಗೊಳ್ಳಲಿದ್ದು, ಶುಕ್ರವಾರದಿಂದ ಸಂಸದರ ಹುದ್ದೆ ಮುಕ್ತಾಯವಾಗುವ ಕಾರಣ ಸಾಂವಿಧಾನಿಕ ಹೊಣೆಗಾರಿಕೆ ಅರಿತು ಇಬ್ಬರೂ ಸಚಿವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಾಗಿರುವ ನಖ್ವಿ ರಾಜ್ಯಸಭೆಯ ಉಪನಾಯಕರೂ ಆಗಿದ್ದಾರೆ. ಸಿಂಗ್ ಅವರು ಜೆಡಿಯು ಕೋಟಾದಿಂದ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024