ಅಮ್ಮ ಮದುವೆಗೆ ನನ್ನನ್ನು ಬಿಟ್ಟು ಹೋದಳು ಎಂದು ಕೋಪಗೊಂಡ 8 ವರ್ಷದ ಬಾಲಕಿಯೊಬ್ಬಳು ಫ್ಯಾನ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.
ಸಂಬಂಧಿಯೊಬ್ಬರ ಮದುವೆಗೆಂದು ತಾಯಿ ಹೊರಟಿದ್ದಳು. ಆಗ ತನ್ನ ಎಂಟು ವರ್ಷದ ಮಗಳನ್ನು ಮನೆಯಲ್ಲೇ ಬಿಟ್ಟು ಆಕೆಯ ತಮ್ಮನನ್ನು ಕರೆದುಕೊಂಡು ಹೋಗಿದ್ದಾಳೆ. ಬಾಲಕಿ ತಾನು ಬರುವುದಾಗಿ ವಿಪರೀತ ಹಠ ಮಾಡಿದ್ದರೂ ತಾಯಿ ಈಕೆಯನ್ನು ಮನೆಯಲ್ಲಿಯೇ ಬಿಟ್ಟು ಮದುವೆಗೆ ಹೋಗಿದ್ದಾಳೆ.
ಮದುವೆ ಮುಗಿಸಿದ ಬಾಲಕಿಯ ತಾಯಿ ಮನೆಗೆ ಬಂದು ಮನೆಯ ಬಾಗಿಲನ್ನು ತಟ್ಟಿದ್ದಾಳೆ. ಆದರೆ ಬಾಲಕಿ ಬಾಗಿಲನ್ನು ತೆರೆದಿಲ್ಲ. ಅನುಮಾನದಿಂದ ಬಾಲಕಿ ತಾಯಿ ನೆರೆಹೊರೆಯವರನ್ನು ಕರೆದು ಬಾಗಿಲು ತೆರೆಯುವಂತೆ ಕೇಳಿಕೊಂಡಿದ್ದಾಳೆ. ಬಾಗಿಲನ್ನು ಒಡೆದು ನೋಡಿದ್ದಾಗ ಮಗಳು ಶವವಾಗಿ ನೇಣಿನ ಕುಣಿಕೆಯಲ್ಲಿ ನೇತಾಡುತ್ತಿರುವ ದೃಶ್ಯ ತಾಯಿಯ ಕಣ್ಣಿಗೆ ಕಂಡಿದೆ.
ಅಮ್ಮ ಮದುವೆಗೆ ನನ್ನ ಬಿಟ್ಟು ತಮ್ಮನ್ನನ್ನು ಕರೆದುಕೊಂಡು ಹೋಗಿದ್ದಾಳೆ. ನನ್ನನ್ನು ಕರೆದು ಕೊಂಡು ಹೋಗಲಿಲ್ಲ ಎಂದು ಕೋಪಗೊಂಡು ಬಾಲಕಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಹೋಗುವ ಮೊದಲೇ ಬಾಲಕಿಯ ಅಂತ್ಯ ಸಂಸ್ಕಾರವನ್ನು ಮಾಡಿ ಮುಗಿಸಲಾಗಿತ್ತು ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಧಮೇರ್ಂದ್ರ ಸಿಂಗ್ ತಿಳಿಸಿದ್ದಾರೆ.
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ