ಅಂತಾರಾಷ್ಟ್ರೀಯ

ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಶ್ರೀಗಳಿಂದ ಕಾಮಗಾರಿ ಪರಿಶೀಲನೆ

ನ್ಯೂಯಾರ್ಕ್: ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದೆ . ಮಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಕಾಮಗಾರಿ ಪರಿಶೀಲನೆ ಮಾಡಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.

ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ.ವನ್ಯಜೀವಿಯಿಂದ ಜೀವಹಾನಿ: ಸ್ಥಳ ಭೇಟಿಗೆ ಸಚಿವ ಖಂಡ್ರೆ ಸೂಚನೆ

ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರು ಆನ್‌ಲೈನ್‌ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್… Read More

May 10, 2024

ರೋಹಿತ್ ಮಾಧ್ಯಮ ಪ್ರಶಸ್ತಿಗೆ ವಿಜಯಕುಮಾರ್ ಆಯ್ಕೆ

ಬೆಂಗಳೂರು: ಚಿಕ್ಕಮಗಳೂರಿನ ಯುವ ಪತ್ರಕರ್ತ ವಿಜಯಕುಮಾರ್ ಎಸ್.ಕೆ. ಅವರಿಗೆ ಈ ಬಾರಿ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.… Read More

May 10, 2024

ಅಕ್ಷಯ ತೃತೀಯ ಬಂತು ಮತ್ತೇ ಖುಷಿಯ ತಂತು

ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More

May 10, 2024

SSLC ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More

May 10, 2024

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024