Categories: Main News

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

  • ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ – ಶಾಸಕ ಮಧು ಜಿ.ಮಾದೇಗೌಡ

ಮಂಡ್ಯ: ‘ಸಕ್ಕರೆ ನಗರ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭ ನೀಡಲಾಗುವುದು ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ‘ಮೆರವಣಿಗೆ ಸಮಿತಿ’ ಸಭೆ ನಡೆಸಿ ಮಾತನಾಡಿದ ಮಧು.ಜಿ.ಮಾದೇಗೌಡ ಅವರು, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸುವುದೆಂದರೆ ಕನ್ನಡ ನಾಡು-ನುಡಿ ಸಾಹಿತ್ಯಕ್ಕೆ ಗೌರವ ಸಲ್ಲಿಸಿದಂತೆ. ಹಾಗಾಗಿ, ಮೆರವಣಿಗೆಯನ್ನು ಯಾವುದೇ ಲೋಪವಿಲ್ಲದಂತೆ ಅರ್ಥಪೂರ್ಣ, ಆಕರ್ಷಕ, ಮತ್ತು ವೈಭವಯುತವಾಗಿ ಆಯೋಜಿಸಬೇಕು. ಮೆರವಣಿಗೆಯ ಯಶಸ್ಸೆ ಸಮ್ಮೇಳನದ ಯಶಸ್ಸು ಕೂಡ ಆಗಲಿದೆ. ಎಂದು ಹೇಳಿದರು.

ಮೆರವಣಿಗೆ ಆರಂಭ

ನಗರದ ಸರ್ ಎಂ.ವಿಶ್ವೇಶ್ವರಯ್ಯರವರ ಪ್ರತಿಮೆ ಮುಂಭಾಗದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಿಸಬೇಕು. ಆರಂಭ ಸ್ಥಳದಿಂದ ಮುಖ್ಯ ವೇದಿಕೆವರೆಗೆ ಸುಮಾರು 6 ಕಿ.ಮೀ ದೂರವಿದ್ದು, ಕ್ರಮಿಸಲು 3 ರಿಂದ 4 ಗಂಟೆ ಸಮಯ ತೆಗೆದುಕೊಳ್ಳಲಿದೆ. ಕನ್ನಡ ಭಾಷೆಯನ್ನು ಮೆರೆಸುವಂತೆ ಮೆರವಣಿಗೆ ಇರಲಿದ್ದು ಸಂಪೂರ್ಣ ಕನ್ನಡ ಮಯವಾಗಿರಲಿದೆ. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ರಸ್ತೆ ಇಕ್ಕೆಲಗಳಲ್ಲಿ ಕನ್ನಡ ಬಾವುಟಗಳಿಂದ ಸಿಂಗಾರ ಮಾಡುವುದು ಹಾಗೂ ಕುಡಿಯುವ ನೀರು, ಕಬ್ಬಿನ ರಸ, ಮಜ್ಜಿಗೆ ಹಾಗೂ ಪಾನಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಕಲಾತಂಡಗಳಿಗೆ ಆದ್ಯತೆ

ಕನ್ನಡದ ಅಸ್ಮಿತೆ ಸಾರುವಂತೆ ಸಮ್ಮೇಳಾನಾಧ್ಯಕ್ಷರ ರಥ ಅಲಂಕರಿಸಲಾಗುವುದು. ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆ, ಹೊರ ಜಿಲ್ಲೆ, ಗಡಿನಾಡು ಜಿಲ್ಲೆ ಹಾಗೂ ಹೊರ ರಾಜ್ಯಗಳ ಕಲಾತಂಡಗಳಿಗೂ ಅವಕಾಶ ಕಲ್ಪಿಸಲಾಗುವುದು. ಕೀಲು ಕುದುರೆ, ಕರಡಿ ಮಜಲು, ಪೂಜಾ ಕುಣಿತ, ಚಂಡೆ ಕುಣಿತ, ತಮಟೆ, ಡೊಳ್ಳು ಕುಣಿತ, ಕೊಂಬು ಕಹಳೆ ಸೇರಿದಂತೆ ವಿವಿಧ ಪ್ರಕಾರಗಳ ಜನಪದ ಕಲಾವಿದರ ದಂಡು ಮೆರವಣಿಗೆಗೆ ಉತ್ಸಾಹ ಮತ್ತು ಶಕ್ತಿ ತುಂಬಲಿದ್ದು, ಜನಪದ ಶ್ರೀಮಂತಿಕೆಯನ್ನು ಬಿಂಬಿಸಲಿವೆ. ಸ್ಕೌಟ್ಸ್ ಮತ್ತು ಎನ್.ಎಸ್.ಎಸ್. ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.

ಸ್ತಬ್ಧಚಿತ್ರ ಮೆರವಣಿಗೆ

ಮೈಸೂರು ದಸರಾ ಮಾದರಿಯಲ್ಲೆ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲೂ ಸ್ತಬ್ಧಚಿತ್ರಗಳು ಇರಬೇಕು. ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ಕನ್ನಡ ನಾಡು ನುಡಿ ಸಂಸ್ಕೃತಿ, ಶಿಲ್ಪಕಲೆ, ಸ್ಥಳೀಯ ಸಂಸ್ಕೃತಿ ಬಿಂಬಿಸುವಂತೆ ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡುವಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಅಲ್ಲದೆ, ಪ್ರತಿ ತಾಲ್ಲೂಕುಗಳ ವಿಶೇಷತೆ, ಸಂಸ್ಕೃತಿ ಬಿಂಬಿಸುವಂತೆ ತಲಾ ಒಂದು ಸ್ತಬ್ಧಚಿತ್ರ ಏರ್ಪಾಡು ಮಾಡುವ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಪೂರ್ಣಕುಂಭ

ಪೂರ್ಣಕುಂಭವು ಮೆರವಣಿಗೆಯಲ್ಲಿ 6 ಕಿ.ಮೀ ಕ್ರಮಿಸಬೇಕಿದೆ. ಸುಮಾರು 870 ಮಹಿಳೆಯರು ಪೂರ್ಣಕುಂಭದೊಂದಿಗೆ ಅಷ್ಟೂ ದೂರದವರೆಗೆ ಸಾಗುವುದು ಕಷ್ಟ. ಹಾಗಾಗಿ, ಮೂರು ತಂಡಗಳನ್ನಾಗಿ ವಿಭಾಗಿಸಿ ನಿರ್ದಿಷ್ಟ ದೂರ ಕ್ರಮಿಸದ ನಂತರ ಬೇರೊಂದು ಪೂರ್ಣಕುಂಭ ತಂಡ ಮೆರವಣಿಗೆ ಸೇರುವಂತೆ ಏರ್ಪಾಡು ಮಾಡಬೇಕು ಎಂಬ ಸಲಹೆ ವ್ಯಕ್ತವಾಯಿತು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಭಾಗವಹಿಸಲಿ

ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸಬೇಕಿದೆ. ಹಾಗಾಗಿ, ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮತ್ತು ಕಾಲೇಜುಗಳ ಮಕ್ಕಳ ಹೆಚ್ಚಿನ ಭಾಗವಹಿಸಲು ಅನುಕೂಲ ಆಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ, ಶಿಕ್ಷಣ ಇಲಾಖೆ, ಎಂಜಿನಿಯರಿಂಗ್ ಮತ್ತು ಮೈದ್ಯಕೀಯ ಕಾಲೇಜುಗಳ ಮುಖ್ಯಸ್ಥರಿಗೆ ಪತ್ರ ಬರೆಯಲಾಗುವುದು ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಸಮಿತಿಯ ಸಂಚಾಲಕ ಕಾರಸವಾಡಿ ಮಹದೇವು ಮಾತನಾಡಿ, ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಕಲಾ ತಂಡಗಳು ಆಗಮಿಸಲಿದ್ದು, ಸುಮಾರು 1000 ಕಲಾವಿದರು ಭಾಗವಹಿಸಲು ಅವಕಾಶ ಕಲ್ಪಿಸಬೇಕು. ವಿವಿಧ ಪ್ರಕಾರಗಳಲ್ಲಿ ಕಲಾತಂಡಗಳಿಗೆ ಅವಕಾಶ ನೀಡುವ ಬಗ್ಗೆ ಚರ್ಚಿಸಿದರು. ಎಂದರು.

ಸಮಿತಿಯ ಉಪಾಧ್ಯಕ್ಷರಾದ ಡಿ.ಪಿ.ಸ್ವಾಮಿ ಅವರು ಮಾತನಾಡಿ, ಎಲ್ಲಾ ಜಿಲ್ಲೆಗಳಿಂದಲೂ ಪ್ರತಿನಿಧಿಕವಾಗಿ ಒಂದು ಕಲಾತಂಡವಿರಬೇಕು. ಗಡಿನಾಡುಗಳಿಂದ ಒಂದೊಂದು ಉತ್ತಮ ತಂಡಗಳನ್ನು ಕರೆಸಬೇಕು. 87 ಎತ್ತಿನಗಾಡಿಗಳಲ್ಲಿ 87 ಸಮ್ಮೇಳನಾಧ್ಯಕ್ಷರ ಭಾವಚಿತ್ರವನ್ನು ಮೆರವಣಿಗೆ ಮಾಡಬೇಕು ಎಂದರು.

ಸಮಿತಿಯ ಸದಸ್ಯ ವೆಂಕಟಗಿರಿಯ್ಯ ಮಾತನಾಡಿ, ಸಮ್ಮೇಳನದ ದಿನವೇ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಬೇಕು. ಮೆರವಣಿಗೆ ವೈಭವಯುತವಾಗಿ ಇರಬೇಕು. ಮುಖ್ಯ ವೇದಿಕೆಗೆ ಮೆರವಣಿಗೆ ಸುಮಾರು 11 ಗಂಟೆ ವೇಳೆಗೆ ತಲುಪುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಮೆರವಣಿಗೆ ಆರಂಭದ ಸಮಯವನ್ನು ನಿರ್ಧರಿಸುವುದು ಸೂಕ್ತ ಎಂದರು. ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ದೊಡ್ಡದಿರುವುದರಿಂದ ಸ್ತಬ್ಧಚಿತ್ರವಿರುವುದು ಸೂಕ್ತ ಎಂದು ಹೇಳಿದರು.

ಡಿ.ದೇವರಾಜ ಅರಸು ಸಂಘಟನೆಯ ಸಂದೇಶ್ ಮಾತನಾಡಿ, ಮೆರವಣಿಗೆಯು ನಗರದಲ್ಲಿ ಸಾಂಸ್ಕೃತಿಕ ವಾತಾವರಣ, ಕನ್ನಡದ ವಾತಾವರಣವನ್ನು ನಿರ್ಮಿಸುವಂತಿರಬೇಕು. ಮೆರವಣಿಗೆ ವೈಭಯುತವಾಗಿ ಇರಬೇಕು. ಕನ್ನಡ ರಥ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುವ ಮೂಲಕ ಪ್ರಚಾರ ನಡೆಸಬೇಕು ಎಂದು ಹೇಳಿದರು.

ಜಯ ಕರ್ನಾಟಕ ಸಂಘಟನೆಯ ಪರಿಷತ್ತಿನ ನಾರಾಯಣ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಮೆರವಣಿಗೆ ಮಾಡುವ ಮೂಲಕ ಪರಿಸರ ಸ್ನೇಹಿ ಸಂದೇಶವನ್ನು ತಲುಪಿಸುವಂತೆ ಆಗಬೇಕು.

ಸಭೆಯಲ್ಲಿ ಐದು ಉಪ ಸಮಿತಿಗಳ ರಚನೆಗೆ ತೀರ್ಮಾನಿಸಲಾಯಿತು.

ಕಲಾತಂಡಗಳ ಆಯ್ಕೆ ಸಮಿತಿ ಸ್ತಬ್ಧಚಿತ್ರ ಆಯ್ಕೆ ಉಪ ಸಮಿತಿ ಪೂರ್ಣಕುಂಭ ಉಪ ಸಮಿತಿ ದೈಹಿಕ ಶಿಕ್ಷಣ ಶಿಕ್ಷರ ಉಪ ಸಮಿತಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಉಪ ಸಮಿತಿ

ಇದನ್ನು ಓದಿ –ಮಂಡ್ಯ ನಗರಸಭೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಎನ್ ಡಿ ಎ ಮೈತ್ರಿ ಕೂಟಯಶಸ್ವಿ

ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಸಮಿತಿಯ ಸದಸ್ಯ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂದೀಶ್, ಕನ್ನಡ ಸೇನೆ ಮಂಜುನಾಥ್, ಜಿಲ್ಲಾ ಕಸಾಪದ ಹುಸ್ಕೂರು ಕೃಷ್ಣೇಗೌಡ, ಹರ್ಷ, ಅಪ್ಪಾಜಪ್ಪ ಹಾಗೂ ಕೀಲಾರ ಕೃಷ್ಣೇಗೌಡ, ಯೋಗಣ್ಣ, ನಾಗಮ್ಮ, ಕುಬೇರಪ್ಪ ಸೇರಿದಂತೆ ಹಲವರು ಹಾಜರಿದ್ದರು.

Team Newsnap
Leave a Comment

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024