9.4 ಲಕ್ಷ ಮಹಿಳೆಯರಿಗೆ ಹಣ ಸಿಕ್ಕಿಲ್ಲ

Team Newsnap
1 Min Read

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಿರುವ 9,44,155 ಮಹಿಳೆಯರಿಗೆ ಇನ್ನೂ ಹಣ ಸಿಕ್ಕಿಲ್ಲ. ಅಲ್ಲದ ಉಳಿದ ಮಹಿಳೆಯರಿಗೆ 2ನೇ ಕಂತಿನ ಹಣ ಬಿಡುಗಡೆ ಆಗಿಲ್ಲ.

ಆಧಾರ್ ಮತ್ತು ಬ್ಯಾಂಕ್ ಖಾತೆ ಜೋಡಣೆಯಲ್ಲಿ ವ್ಯತ್ಯಾಸ ಆಗಿರುವ ಮತ್ತಿತರ ತಾಂತ್ರಿಕ ಕಾರಣಕ್ಕೆ ಅವರಿಗೆ ಹಣ ನೀಡಲಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ
3,082 ಅರ್ಜಿದಾರರು ಮರಣ ಹೊಂದಿದ್ದಾರೆ.

ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದೆ. ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ ಎಂದು ಸಚಿವೆ ತಿಳಿಸಿದ್ದಾರೆ.

ಉಳಿದಂತೆ 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್‍ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಜನರಿಗೆ ದತ್ತಾಂಶ  ಸಮಸ್ಯೆಯಿಂದ ಉಂಟಾದ ವಿಳಂಬವನ್ನು ಸೇವಾಸಿಂಧು ಆ್ಯಪ್ ಮೂಲಕ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಅಕ್ಟೊಬರ್ 4ರ ವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮೀ ನೋಂದಣಿಯಾಗಿದ್ದರೂ ಸಾಕಷ್ಟು ಮಹಿಳೆಯರಿಗೆ ಹಣವೇ ಬಂದಿಲ್ಲ. ಈ ಬಗ್ಗೆ ಅರ್ಜಿ ಸಲ್ಲಿಸಿದ ಮಹಿಳೆಯರು ಬೇಸರಗೊಂಡಿದ್ದಾರೆ. ಸರ್ಕಾರ ಮೋಸ ಮಾಡಿದೆ ಎಂದು ಕಿಡಿಕಾರುತ್ತಿದ್ದಾರೆ. ಇನ್ನು ಮಹಿಳೆಯರು ನಿತ್ಯ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದಗಳಿಗೆ ತೆರಳಿ ಅಲ್ಲಿನ ಸಿಬ್ಬಂದಿಗೆ ವಿಚಾರಣೆ ನಡೆಸುತ್ತಿದ್ದಾರೆ.ಪಿತೃ ಪಕ್ಷ : ಕಾಗೆಗಳಿಗೆ ವಿಶೇಷ ಸ್ಥಾನ

ಎರಡನೇ ಕಂತು ಯಾವಾಗ: ಆಗಸ್ಟ್ ತಿಂಗಳ ಮೊದಲ ಕಂತಿನ ಹಣ ಮಾತ್ರ ಮಹಿಳೆಯರಿಗೆ ಸಿಕ್ಕಿದೆ. ಆದರೆ ಸೆಪ್ಟೆಂಬರ್ ತಿಂಗಳ ಹಣ ಬಂದಿಲ್ಲ. ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎಂಬ ಮಾಹಿತಿ ನೀಡಿಲ್ಲ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೂಡ ಉತ್ತರ ನೀಡಿಲ್ಲ.

Share This Article
Leave a comment