ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು

Team Newsnap
1 Min Read

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಮಾರ್ಚ್ 1, 2021 ರ ಅಂಕಿ – ಅಂಶದಂತೆ ಒಟ್ಟು 9.79 ಲಕ್ಷ ಹುದ್ದೆಗಳು ಖಾಲಿ ಇವೆ.

ಈ ಪೈಕಿ ರೈಲ್ವೆ ಇಲಾಖೆ ಒಂದರಲ್ಲೇ ಅತ್ಯಧಿಕ ಅಂದರೆ 2.93 ಲಕ್ಷ ಹುದ್ದೆಗಳು ಖಾಲಿ ಇದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ನೀಡಿರುವ ಲಿಖಿತ ಉತ್ತರದಲ್ಲಿ ರಕ್ಷಣಾ (ಸಿವಿಲ್) 2.64 ಲಕ್ಷ, ಗೃಹ 1.43 ಲಕ್ಷ, ಅಂಚೆ ಇಲಾಖೆಯಲ್ಲಿ 90,050, ರೆವಿನ್ಯೂ ಇಲಾಖೆಯಲ್ಲಿ 80,243, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಖಾತೆ ವಿಭಾಗದಲ್ಲಿ 25,934 ಮತ್ತು ಪರಮಾಣು ಶಕ್ತಿ ಇಲಾಖೆಯಲ್ಲಿ 9,460 ಹುದ್ದೆಗಳು ಖಾಲಿ ಇವೆ ಎಂದು ಅವರು ತಿಳಿಸಿದ್ದಾರೆ.

ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುವ ಕುರಿತಂತೆ ಸರ್ಕಾರ ಎಲ್ಲಾ ಸಚಿವಾಲಯ ಹಾಗೂ ಇಲಾಖೆಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದೆ ಎಂದು ಹೇಳಿರುವ ಸಚಿವರು, ಇದರ ಜೊತೆಗೆ ಕೇಂದ್ರ ಸರ್ಕಾರ ಆಯೋಜಿಸುತ್ತಿರುವ ಉದ್ಯೋಗ ಮೇಳಗಳಿಂದ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ

Share This Article
Leave a comment