ಲಾರಿ – ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡ ಘಟನೆ ತುಮಕೂರಿನ ಕಳ್ಳಂಬೆಳ್ಳದ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಬೆಂಗಳೂರಿನಿಂದ ರಾಯಚೂರಿನತ್ತ ಹೊರಟಿದ್ದ ಕ್ರೂಸರ್ ಗೆ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ದುರಂತ ಇಂದು ಬೆಳಗಿನ ಜಾವ 4.30 ರ ವೇಳೆಗೆ ಸಂಭವಿಸಿದೆ.

ಈ ದುರಂತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಗಾಯಗೊಂಡ 12 ಮಂದಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸತ್ತವರೆಲ್ಲಾ ರಾಯಚೂರು ಜಿಲ್ಲೆಯ ಜನರು ಎಂದು ಗೊತ್ತಾಗಿದೆ.
ಈ ಕ್ರೂಸರ್ ನಲ್ಲಿ 20 ಮಂದಿ ಪ್ರಯಾಣ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಕಳ್ಳಂಬೆಳ್ಳ ಹಾಗೂ ಶಿರಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ