ಶೇ90 ರಷ್ಟು ಪೊಲೀಸ್ ಅಧಿಕಾರಿಗಳು ಭ್ರಷ್ಟರು, ಶೇ 10 ರಷ್ಟು ಅಧಿಕಾರಿಗಳು ಮಾತ್ರ ಪ್ರಾಮಾಣಿಕರು ಮತ್ತು ತನಿಖೆಗೆ ಸಮರ್ಥರು ಎಂದು ಮದ್ರಾಸ್ ಹೈಕೋರ್ಟ್ ನೇರವಾಗಿ ಹೇಳಿದೆ.
ಕೋರ್ಟ್ ಆದೇಶಕ್ಕೆ ಉದ್ದೇಶಪೂರ್ವಕವಾಗಿಯೇ ಅವಿಧೇಯತೆ ತೋರಿಸಿದ್ದಾರೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರ ವಿರುದ್ಧ ಅರ್ಜಿ ಸಲ್ಲಿಕೆ ಆಗಿತ್ತು.
ಈ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡುವ ವೇಳೆ ಪೊಲೀಸ್ ಇಲಾಖೆಯಲ್ಲಿ ಶೇ 90 ರಷ್ಟು ಭ್ರಷ್ಟರು ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದೆ.
ಪೊಲೀಸ್ ಅಧಿಕಾರಿಗಳಿಗೆ ತನಿಖೆಗೆ ಅಗತ್ಯವಿರುವ ಪರಿಣಿತಿಯ ಕೊರತೆ ಇದೆ. ಹೀಗಾಗಿ ಪೊಲೀಸ್ ಇಲಾಖೆಯು ಸರಿಯಾದ ತನಿಖಾಧಿಕಾರಿಗಳು ಇಲ್ಲದೇ ನಲುಗುತ್ತಿದೆ. ನಮ್ಮ ಪ್ರಕಾರ ಶೇ10 ರಷ್ಟು ಅಧಿಕಾರಿಗಳು ಮಾತ್ರ ಪ್ರಾಮಾಣಿಕರು ಮತ್ತು ಸೂಕ್ತ ತನಿಖೆ ನಡೆಸಲು ಅರ್ಹರು ಎಂದು ನ್ಯಾಯಮೂರ್ತಿ ಪಿ.ವೇಲ್ಮುರುಗನ್ ಹೇಳಿದ್ದಾರೆ.
ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಅವರ ಅಸಮರ್ಥತೆಯ ವಿರುದ್ಧ ಕ್ರಮಕೈಗೊಳ್ಳಲು ಹಾಗೂ ಕೋರ್ಟ್ ಮೂಲಕ ಪರಿಹಾರ ಕಂಡುಕೊಳ್ಳಲು ಅರ್ಜಿದಾರರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ