ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ನಿನ್ನೆಗೆ ಅಂತ್ಯವಾಗಿ ಶೇ 94.77 ರಷ್ಟು ಮತದಾನವಾಗಿದೆ.
ಏ.29 ರಿಂದ ಮೇ 6 ವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು . ಈ ಬಾರಿ ಶೇಕಡ 94.77 ರಷ್ಟು ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
80,250 ಮಂದಿ 80 ವರ್ಷ ಮೇಲ್ಪಟ್ಟ ಹಾಗೂ 19,279 ಮಂದಿ ವಿಶೇಷ ಚೇತನರು ತಮ್ಮ ಹೆಸರು ನೊಂದಾಯಿಸಿಕೊಂಡಿದ್ದರು.
ಇದರಲ್ಲಿ 75,690 ಮಂದಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ ಚಲಾಯಿಸಿದ್ದಾರೆ. ವಿಶೇಷ ಚೇತನರ ಪೈಕಿ 18,636 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಮೇ.8ರಂದು ನಾಳೆ ಸಂಜೆ 6 ಗಂಟೆಗೆ ರಾಜ್ಯಾಧ್ಯಂತ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲಿದೆ.
ಮೇ.8 ರ ಸಂಜೆ 6ಗಂಟೆಯ ಬಳಿಕ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಬಹುದು.