ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.
ಈ ಹಿನ್ನೆಲೆ ರಾತ್ರಿ 9.30ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ಯತ್ನಾಳ್ 25 ಪುಟಗಳ ಸುದೀರ್ಘವಾದ ಉತ್ತರ ಸಹ ನೀಡಿದ್ದರು.
ಇಂದು ಪ್ರತಿಭಟನೆಯಲ್ಲಿ ಭಾಗಿ ಸರ್ಕಾರದ ವಿರುದ್ಧವೇ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಹಲವು ತಿಂಗಳಿಂದ ಬಿಎಸ್‍ವೈ, ಸರ್ಕಾರ, ಸಚಿವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್ ದೆಹಲಿ ಪ್ರವಾಸ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ