ಎಲ್ಲೆಂದರಲ್ಲಿ ಕಸ ಹಾಕಿದರೆ ಜೈಲು; ಸಚಿವ ಎಸ್‌ ಟಿ ಎಸ್ ಖಡಕ್ ಎಚ್ಚರಿಕೆ

Team Newsnap
1 Min Read
  • 120 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ರಿಂಗ್ ರೋಡ್ ಡಾಂಬರೀಕರಣ ಕಾಮಗಾರಿಗೆ ಚಾಲನೆ
  • ಬಿಜೆಪಿಯವರೇ ಮೇಯರ್ ಆಗುವ ವಿಶ್ವಾಸವಿದೆ; ಸಚಿವ ಸೋಮಶೇಖರ್

ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದ್ದೇವೆ. ಇಲ್ಲೇ ಸುತ್ತಮುತ್ತಲು ಇರುವ ಡಬ್ರೀಸ್ ಗಳನ್ನು ತೆರವುಗೊಳಿಸಲಾಗಿದೆ. ಆದರೆ ಇನ್ನು ಮುಂದೆ ಎಲ್ಲೆಂದರಲ್ಲಿ ಯಾರೇ ಡಬ್ರೀಸ್ ಹಾಕಿದರೆ ಅವರಿಗೆ ಜೈಲು ಶಿಕ್ಷೆ ಹಾಗೂ ದಂಡ ಬೀಳಲಿದೆ. ಜತೆಗೆ ಡೆಬ್ರಿಸ್ ತಂದು ಹಾಕುವ ವಾಹನಗಳು ಜಪ್ತಿ ಗೊಳ್ಳಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

120 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ರಿಂಗ್ ರೋಡ್ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಸ ತಂದು ಹಾಕುವ ವಾಹನ ಮಾಲೀಕರು ಸಹ ಕಾರಾಗೃಹ ವಾಸ ಅನುಭವಿಸಬೇಕಾಗುತ್ತದೆ. ಡೆಬ್ರಿಸ್ ಸ್ವಚ್ಚತಾ ಕಾರ್ಯ ಪೂರ್ಣಗೊಂಡಿದೆ. ಒಂದು ವೇಳೆ ಮತ್ತೆ ಯಾರಾದರೂ ಡೆಬ್ರಿಸ್ ಹಾಕಿದರೆ ಜೈಲುವಾಸ ಪಕ್ಕಾ ಆಗಲಿದೆ. ಮುಡಾದವರು ತೋರಿಸಿದ ಜಾಗದಲ್ಲಿ ಹಾಕಬೇಕು. ಅದು ಬಿಟ್ಟು ಎಲ್ಲಾ ಕಡೆ ಈ ಮೊದಲಿನಂತೆ ಹಾಕಲು ಹೋದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು.

ring road1

ಮೇಯರ್ ಆಯ್ಕೆಗೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗುತ್ತೇನೆ. ಇನ್ನೂ ಭೇಟಿಯಾಗಿಲ್ಲ. ಪಕ್ಷದ ಅಧ್ಯಕ್ಷರು, ಲೋಕಸಭಾ ಸದಸ್ಯರು, ಶಾಸಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಿಜೆಪಿಯವರೇ ಮೇಯರ್ ಆಗುವ ವಿಶ್ವಾಸವಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು

ಪಂಚಮಸಾಲಿ ಹೋರಾಟಕ್ಕೆ ಸಂಬಂಧಪಟ್ಟಂತೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಈ ಸಂಬಂಧ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲೂ ಸಹ ಒಂದು ಮಟ್ಟದ ಚರ್ಚೆಗಳೂ ಆಗಿವೆ ಎಂದು ಸಚಿವರು ಉತ್ತರಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
Leave a comment