ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲು ಸಮೀಕ್ಷೆ ಮಾಡಲು ಪೊಲೀಸ್ ಆಯುಕ್ತ ಕಮಲ್ ಪಂತ್ ಎಲ್ಲಾ ವಲಯದ ಡಿಸಿಪಿಗಳಿಗೆ ನಿರ್ದೇಶನ ನೀಡಿದ್ದಾರೆ.
100ಕ್ಕಿಂತ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕುರಿತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕಮಲ್ ಪಂತ ಸೂಚಿಸಿದ್ದಾರೆ.
ಕರ್ನಾಟಕ ನಾಗರಿಕರ ಸುರಕ್ಷಾ ಕಾಯ್ದೆ 2018ರ ಅನ್ವಯ ಜನರ ರಕ್ಷಣೆ ಸಲುವಾಗಿ 100ಕ್ಕಿಂತ ಹೆಚ್ಚಿನ ಜನ ಸೇರುವ ವಾಣಿಜ್ಯ ಸಂಕೀರ್ಣ, ಧಾರ್ಮಿಕ ಕೇಂದ್ರಗಳು, ಮಾಲ್ಗಳು, ಆಸ್ಪತ್ರೆ ಮುಂತಾದ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕಿದೆ.
ಈ ಕಾಯ್ದೆ ಜಾರಿಗೊಂಡ ಬಳಿಕವೂ ಕೆಲವರು ಜಾಗೃತವಾಗಿಲ್ಲ. ಹೀಗಾಗಿ ಪ್ರತಿ ಠಾಣಾ ಮಟ್ಟದಲ್ಲೇ ನಾಗರಿಕರ ಸುರಕ್ಷಾ ಕಾಯ್ದೆ ಅನುಷ್ಠಾನದ ಬಗ್ಗೆ ಪರಿಶೀಲನೆಗೆ ಮುಂದಾಗಿದ್ದಾರೆ.
ಈ ಮೂಲಕ ಕಾನೂನು ಉಲ್ಲಂಘಿಸಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ನಿರ್ಧಾರ ಮಾಡಲಾಗಿದೆ.
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ