ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ , ಇಲ್ಲ ಎನ್ನುವ ತರ್ಕಗಳ ನಡುವೆಯೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಆತ್ಮ ಸಂಚಾರ ಮಾಡಿದೆ ಎನ್ನಲಾದ ದೃಶ್ಯವೊಂದು ಸಿಸಿಟಿವಿಯಲ್ಲಿ ದಾಖಲಾಗಿದೆ.
ನಗುವಿನಹಳ್ಳಿ ಗ್ರಾಮದ ಗೋಪಾಲ್ ಎಂಬವರ ತೋಟದ ಮನೆಯಲ್ಲಿ ಜನವರಿ 31 ರಂದು ಇದ್ದಕ್ಕಿದ್ದ ಹಾಗೆ ಕಪ್ಪು ನೆರಳೊಂದು ಸಂಚಾರ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಕಂಡ ಜನರೆಲ್ಲಾ ಇದು ಆತ್ಮ ಸಂಚಾರ ಮಾಡುವ ದೃಶ್ಯ ಎಂದು ಹೇಳುತ್ತಿದ್ದಂತೆ ಆತಂಕದ ವಾತಾವರಣ ಸೃಷ್ಟಿಯಾಯಿತು.
ಗೋಪಾಲ್ ತೋಟದ ಮನೆ ನಗುವಿನಹಳ್ಳಿ ಗ್ರಾಮದ ಹೊರ ಭಾಗದಲ್ಲಿರುವ ಒಂದು ಹಳ್ಳ ಹರಿಯುತ್ತಿದೆ.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಹ ಇದೆ. ಇಲ್ಲಿ ಹಲವು ವರ್ಷಗಳ ಹಿಂದೆ ಮಹಿಳೆ ಹಾಗೂ ಯುವಕ ಅಪಘಾತದಿಂದ ಮೃತಪಟ್ಟಿದ್ದರು. ಜೊತೆಗೆ ಓರ್ವ ಕುಡಿದ ಮತ್ತಿನಲ್ಲಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಗಳ ಆತ್ಮಗಳು ಸಂಚಾರ ಮಾಡುವ ದೃಶ್ಯಗಳು ಸೆರೆಯಾಗಿವೆ ಎಂದು ಸ್ಥಳೀಯರ ಅನಿಸಿಕೆ.
ಗೋಪಾಲ್ ಕಳ್ಳರ ಭಯದಿಂದ ಸಿಸಿಟಿವಿ ಕ್ಯಾಮೆರಾವನ್ನು ತಮ್ಮ ತೋಟದ ಮನೆಯಲ್ಲಿ ಸಿಸಿಟಿವಿ ಹಾಕಿಸಿದ್ದರು. ಇದೀಗ ಅದೇ ಸಿಸಿಟಿವಿಯಲ್ಲಿ ಕಳ್ಳರ ಬದಲಿಗೆ ಆತಂಕ ಹುಟ್ಟಿಸುವ ದೃಶ್ಯವೊಂದು ಸೆರೆಯಾಗಿರುವುದನ್ನು ನೋಡಿ ಗ್ರಾಮಸ್ಥರಲ್ಲಿ ಒಂದಷ್ಟು ಆತಂಕ ಹುಟ್ಟಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು