December 25, 2024

Newsnap Kannada

The World at your finger tips!

POLITICAL MINISTER

ಅರ್ಪಾಟ್ ಮೆಂಟ್ , ದೊಡ್ಡ ಕಟ್ಟಡಗಳಲ್ಲಿ ಕಡ್ಡಾಯವಾಗಿ ವಾಹನ ಚಾಜ್೯ ವ್ಯವಸ್ಥೆ ಇರಬೇಕು – ಡಿಸಿಎಂ ಅಶ್ವಥ್ ನಾರಾಯಣ

Spread the love

ಇನ್ನು ಮುಂದೆ ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು, ಎಲೆಕ್ಟ್ರಿಕ್ ವಾಹನಗಳ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನರೆನ್ಸ್ ವತಿಯಿಂದ ಏರ್ಪಡಿಸಿದ್ದ ಭವಿಷ್ಯದತ್ತ ಸುಸ್ಥಿರ ಸಾರಿಗೆ ವರ್ಚುಯಲ್ ಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯ ಮಂತ್ರಿ ಅಶ್ವತ್ಥ ನಾರಾಯಣ ಚಾರ್ಜಿಂಗ್ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಧರು.

ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರೆ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ಮಾಡಿಕೊಳ್ಳುವಂಥ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬ್ಯಾಟರಿ ಚಾಲಿತ ವಾಹನಗಳು ಮಾರುಕಟ್ಟೆಗೆ ಬರಲಿವೆ ಎಂದರು.ಬ

ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆಯಬಹುದು. ಎಲ್ಲೆಡೆ ಪೆಟ್ರೋಲ್ ಬಂಕ್‍ಗಳಂತೆ ಬ್ಯಾಟರಿ ಬಂಕ್‍ಗಳೂ ತಲೆ ಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.

ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಎಲೆಕ್ಟ್ರಿಕ್ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‍ಗಿಂತ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!