ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸರು ಬಿಜೆಪಿ ಮುಖಂಡ ರಾಕೇಶ್‌ಸಿಂಗ್‌ಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಕಾರಿನಲ್ಲಿ ಕೋಕೇನ್ ಸಹಿತ ಸಿಕ್ಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಬಂಗಾಳ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಹಾಗೂ ಅವರ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿತ್ತು.
ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಸಂಚರಿಸುತ್ತಿದ್ದ ಕಾರಿನಲ್ಲಿ ಲಕ್ಷಾಂತರ ರು ಮೌಲ್ಯದ 100 ಗ್ರಾಂ ಕೋಕೇನ್ ನನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಬಂಧಿತ ಆರೋಪಿ ಪಮೇಲಾ ಗೋಸ್ವಾಮಿಯವರನ್ನು ಕೊಲ್ಕತ್ತಾದ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ಬಿಜೆಪಿ ಮುಖಂಡ ರಾಕೇಶ್‌ಸಿಂಗ್ ಪಿತೂರಿಯಿದೆ ಎಂದು ದೂರಿದ್ದರು.
ಈ ಸಂಬಂಧ ಪೊಲೀಸರು ಫೆಬ್ರವರಿ 23 ಸಂಜೆ 4 ಗಂಟೆಗೆ ಬಿಜೆಪಿ ಮುಖಂಡ ರಾಕೇಶ್‌ಸಿಂಗ್‌ಗೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು