ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಮತ್ತು ಇಬ್ಬರು ಪುತ್ರರನ್ನು ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿಯಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ವಿಚಾರಣೆ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು.ಈ ಕಾರಣಕ್ಕಾಗಿ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ನನ್ನು ಬಂಧಿಸಲಾಗಿದೆ.

ಇಬ್ಬರು ಪುತ್ರರ ಬಂಧನ:
ಬಂದರು ಪ್ರದೇಶದಲ್ಲಿರುವ ಬಿಜೆಪಿ ರಾಜ್ಯ ಸಮಿತಿ ಮುಖಂಡನ ಮನೆ ಪ್ರವೇಶಿಸದಂತೆ ಸಿಬ್ಬಂದಿಯನ್ನು ರಾಕೇಶ್ ಸಿಂಗ್ ಪುತ್ರರು ತಡೆದಿದ್ದರು. ಮನೆ ಶೋಧಕಾರ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಇಬ್ಬರು ಪುತ್ರರನ್ನು ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ರಾಕೇಶ್ ಸಿಂಗ್‍ಗಾಗಿ ಹುಡುಕಾಟ ಮಾಡುವಾಗ ಸಿಂಗ್ ವಾಹನವನ್ನು ಬದಲಿಸಿ ಪ್ರಯಾಣ ಮಾಡುತ್ತಿದ್ದಾರೆ ಎನ್ನುವ ಸುಳಿವು ಸಿಕ್ಕಿತ್ತು.
ಕೋಲ್ಕತ್ತಾ ಪೊಲೀಸರು ನೀಡಿದ ಮಾಹಿತಿಗೆ ಅನುಸಾರವಾಗಿ ಗಲ್ಸಿ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾದಲ್ಲಿ ರಾಕೇಶ್ ಸಿಂಗ್‍ನನ್ನು ಬಂಧಿಸಲಾಗಿದೆ.
ಸಿಂಗ್‍ಗೆ ಭದ್ರತೆ ನೀಡಿದ್ದ ಸಿಐಎಸ್‍ಎಫ್ ಸಿಬ್ಬಂದಿಯ ಜತೆ ಕಾರಿನಲ್ಲಿ ಆರೋಪಿ ಅಜ್ಞಾತ ಸ್ಥಳಕ್ಕೆ ಹೋಗುತ್ತಿದ್ದರು ಎನ್ನಲಾಗುತ್ತಿದೆ.
ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ತೋರುತ್ತಿತ್ತು ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ