December 23, 2024

Newsnap Kannada

The World at your finger tips!

ambani car

ಉದ್ಯಮಿ ಅಂಬಾನಿ ನಿವಾಸದ ಬಳಿ ಕಾರ್ ನಲ್ಲಿ 20 ಜಿಲಿಟಿನ್ ಕಡ್ಡಿ ಪತ್ತೆ

Spread the love

ಮುಂಬೈ ನ ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್​ ಪತ್ತೆಯಾಗಿದೆ.

ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್​ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್​, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರ ಭೇಟಿ ಕೊಟ್ಟಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ.

ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಕಾರ್ಪಿಯೊ ವಾಹನವೊಂದು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಈ ವೇಳೆ, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಜೆಲೆಟಿನ್​ ಕಡ್ಡಿಗಳು ಇರುವುದು ಕಂಡುಬಂದಿದೆ.

ಇನ್ನು, ಈ ಕುರಿತು ಪ್ರತಿಕ್ರಿಯಿಸಿದ ಮುಂಬೈ ಪೊಲೀಸ್​ ವಕ್ತಾರ DCP ಚೈತನ್ಯ ವಾಹನದಲ್ಲಿ ಸ್ಫೋಟಕ ಜಿಲೆಟಿನ್​ ಕಡ್ಡಿಗಳು ಇರುವುದು ಪತ್ತೆಯಾಗಿದೆ. ಆದರೆ, ಇದು ಬಾಂಬ್​ ಮಾದರಿಯಲ್ಲಿ ರೂಪಿಸಿರುವುದು ಸದ್ಯಕ್ಕೆ ಕಂಡುಬಂದಿಲ್ಲ. ಸದ್ಯ, ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

ಪೊಲೀಸರಿಗೆ ಸಿಕ್ಕ ಈ ಸ್ಕಾರ್ಪಿಯೊ ವಾಹನದ ನೋಂದಣಿ ಸಂಖ್ಯೆ ಉದ್ಯಮಿಯ ಭದ್ರತಾ ಸಿಬ್ಬಂದಿ ಬಳಸುವ ವಾಹನಗಳಿಗೆ ಹೋಲುತ್ತದೆ.‌ಅಲ್ಲದೆ ವಾಹನ ದಿಂದ ಪತ್ರವೊಂದು ದೊರೆತಿದೆ ಪೋಲಿಸರು ತಿಳಿಸಿದ್ದಾರೆ

Copyright © All rights reserved Newsnap | Newsever by AF themes.
error: Content is protected !!