ದೋಣಿವಿಹಾರಕ್ಕೆ ಹೋದ ತಂದೆ, ಮಗ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಲಿ
ಘಟನೆ ಮಹಾರಾಷ್ಟ್ರದ ಉಜನಿ ಹಿನ್ನೀರಿನಲ್ಲಿ ಸೋಮವಾರ ಜರುಗಿದೆ. 13 ವರ್ಷದ ಮಗ ಮತ್ತು 49 ವರ್ಷದ ತಂದೆ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸೆಲ್ಫಿ ಹುಚ್ಚಾಟಕ್ಕೆ ಇಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.ದಂಪತಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಹಿನ್ನೀರಿನಲ್ಲಿ ದೋಣಿ ವಿಹಾರಕ್ಕೆ ಹೋಗಿದ್ದಾರೆ.
ಈ ವೇಳೆ ಬೇರೆ ಬೇರೆ ಪೋಸ್ ಕೊಟ್ಟು ಸೆಲ್ಫಿ ತೆಗೆದುಕೊಂಡಿದ್ದಾರೆ. ಸೆಲ್ಫಿಗೆ ಪೋಸ್ ಕೊಡುತ್ತಾ ತುದಿಯವರೆಗೂ ಹೋಗಿ ನಿಂತಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ನೀರಿಗೆ ದೋಣಿಯಲ್ಲಿದ್ದ 6 ಮಂದಿ ಬಿದ್ದಿದ್ದಾರೆ.
ದೋಣಿ ಮಗುಚಿರುವುದನ್ನು ಕಂಡು ಹತ್ತಿರದಲ್ಲೇ ಇದ್ದ ಮೀನುಗಾರರು ಬಂದು ರಕ್ಷಣೆ ಮಾಡುವಷ್ಟರಲ್ಲಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉಳಿದವರನ್ನು ರಕ್ಷಿಸಿ ದಡಕ್ಕೆ ಕರೆದುಕೊಂಡು ಬರಲಾಗಿದೆ ಎಂದು ಸೊಲ್ಲಾಪುರ ಎಸ್‍ಪಿ ತೇಜಸ್ವಿ ಸತ್ಪು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ