ಮುಖ್ಯಮಂತ್ರಿ ಯಡಿಯೂರಪ್ಪ ಸಹ ಸ್ವತಃ ರಮೇಶ್ ಜಾರಕಿಹೊಳಿ ರಾಜೀನಾಮೆ ಕೇಳಿದ ನಂತರ ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಬೆಂಬಲಿಗರು ರಾಜೀನಾಮೆಯನ್ನು ಖಂಡಿಸಿದ್ದಾರೆ.
ಸಿಎಂ ಅವರು ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಒತ್ತಾಯಪೂರ್ವಕವಾಗಿ ಗೋಕಾಕ್ ಬಂದ್ ಮಾಡಲು ಮುಂದಾಗಿದ್ದಾರೆ.
ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡುತ್ತಿದ್ದಂತೆ ಬೆಳಗಾವಿಯ ಗೋಕಾಕ್ನಲ್ಲಿ ಬೆಂಬಲಿಗರು ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ.
ಯಡಿಯೂರಪ್ಪನವರು ಸಚಿವರ ರಾಜೀನಾಮೆ ಸ್ವೀಕರಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕೈನಲ್ಲಿ ಪೆಟ್ರೋಲ್ ಕ್ಯಾನ್ ಹಿಡಿದು ಬೆದರಿಕೆ ಒಡ್ಡುತ್ತಿದ್ದಾರೆ.
ಕೆಲವರು ಕೈನಲ್ಲಿ ಬಡಿಗೆ-ಕಲ್ಲು ಹಿಡಿದು ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಬಂದ್ ಮಾಡಿಸುತ್ತಿದ್ದಾರೆ. ಇನ್ನೂ ಕೆಲವೆಡೆ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚುವ ಮೂಲಕ ಅವರ ರಾಜೀನಾಮೆಯನ್ನು ವಿರೋಧಿಸಿದ್ದಾರೆ.
ಗೋಕಾಕ್ನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ರಮೇಶ್ ಬೆಂಬಲಿಗರ ಆಟಾಟೋಪಗಳಿಗೆ ನಿಯಂತ್ರಣ ಹೇರುವುದೇ ಪೊಲೀಸರಿಗೆ ದೊಡ್ಡ ಸವಾಲಿನ ಕೆಲಸವಾಗಿ ಪರಿಣಮಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು