ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ ಗರಿಷ್ಠ (100 ರುಗಳಷ್ಟು) ಏರಿಕೆ ಆಗಿರುವುದನ್ನು ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿ, ದರ ಇಳಿಕೆ ಮಾಡಲು ಚಿಂತಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 8.5 ರು ಕಡಿತಗೊಳಿಸಬಹುದು ಎಂದು ಅಂದಾಜಿಸಲಾಗಿದೆ.
ಇಂಧನ ಮೇಲಿನ ತೆರಿಗೆಯಿಂದ ಬರುವ ಆದಾಯದ ಗುರಿಯ ಮೇಲೆ ಪರಿಣಾಮ ಬೀರದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8.5 ರೂಪಾಯಿಯಷ್ಟು ಕಡಿತಗೊಳಿಸಲು ಸರ್ಕಾರಕ್ಕೆ ಅವಕಾಶವಿದೆ .
ದೇಶಾದ್ಯಂತ ಇಂಧನ ಬೆಲೆ ಇಳಿಕೆಗೆ ತೀವ್ರ ಒತ್ತಾಯ ಕೇಳಿ ಬಂದಿದೆ. ಹೀಗಾಗಿ 2021 ರ ಏಪ್ರಿಲ್ 1 ಅಥವಾ ಅದಕ್ಕಿಂತ ಮೊದಲೇ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಚರ್ಚೆ ನಡೆದಿದೆ.
ಸರ್ಕಾರದ ಆದಾಯದ ಗುರಿಯ ಲೆಕ್ಕಾಚಾರ, ಅಬಕಾರಿ ಸುಂಕ ಸಂಗ್ರಹ ಮೊದಲಾದವುಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. 2020 ರ ಮಾರ್ಚ್ ಮತ್ತು ಏಪ್ರಿಲ್ ನಡುವೆ ಲೀಟರ್ ಪೆಟ್ರೋಲ್ 13 ರೂ. ಮತ್ತು ಡೀಸೆಲ್ ಗೆ 16 ರೂ. ನಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಲೀಟರ್ ಡೀಸೆಲ್ ಗೆ 31.8 ರೂಪಾಯಿ ಮತ್ತು ಪೆಟ್ರೋಲ್ ಗೆ 32.9 ರೂಪಾಯಿ ಅಬಕಾರಿ ಸುಂಕವಿದೆ.
ಇದರಲ್ಲಿ ಸರ್ಕಾರದ ಆದಾಯಕ್ಕೆ ತೊಂದರೆಯಾಗದಂತೆ 8.5 ರೂಪಾಯಿ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ