ವಿಧಾನಸಭೆ ಕಲಾಪದಲ್ಲಿ ಆಂಗಿ (ಶಟ್೯) ಬಿಚ್ಚಿದ ಕಾರಣಕ್ಕಾಗಿ ಕಾಂಗ್ರೆಸ್ನ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಕಾಲ ಸದನದಿಂದ ಅಮಾನತು ಮಾಡಲಾಗಿದೆ.
ಇಂದಿನ ವಿಧಾನ ಸಭಾ ಕಲಾಪದ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭದ್ರಾವತಿ ಶಾಸಕ ಸಂಗಮೇಶ್ ಶರ್ಟ್ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಸಂಗಮೇಶ್ ನಡೆಗೆ ಸ್ಪೀಕರ್ ಕಾಗೇರಿ ತೀವ್ರ ಅಸಮಾಧಾನಗೊಂಡು ಸದನದಲ್ಲಿ ಗೌರವದಿಂದ ನಡೆದುಕೊಳ್ಳಿ ಎಂದು ಹೇಳಿದ್ದರು.
ಕ್ಷೇತ್ರದ ಜನತೆಗೆ ಅಗೌರವ ತರಬೇಡಿ. ಅಶಿಸ್ತಿನಿಂದ ನಡೆದುಕೊಂಡರೆ ಹೊರಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.
ಬಳಿಕ ಸಂಗಮೇಶ್‌ಗೆ ಡಿ.ಕೆ. ಶಿವಕುಮಾರ್ ಶರ್ಟ್ ಹಾಕಿಸಿದ್ದರು.
ಅಂಗಿ ಬಿಚ್ಚಿದ್ದು ಅತಿರೇಕವೇನಲ್ಲ- ಶಾಸಕ :
ಭದ್ರಾವತಿ ಜನ ನನ್ನನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ. ಆರ್ಎಸ್ಎಸ್, ಬಿಜೆಪಿ, ಬಜರಂಗದಳದವರು ಭದ್ರಾವತಿಯಲ್ಲಿ ಕೋಮುಗಲಭೆ ಮಾಡಬೇಕು ಅನ್ಕೊಂಡಿದ್ದಾರೆ. ಕರಾವಳಿಯ ರೀತಿಯಲ್ಲೇ ಹಿಂದುತ್ವದಿಂದ ಗೆಲ್ಲಬಹುದು ಎಂದು ನನ್ನ ಮೇಲೆ, ಕುಟುಂಬದ ಮೇಲೆ ಅಟ್ರಾಸಿಟಿ ಕೇಸ್ ಹಾಕಿದ್ದಾರೆ. ನಾನು ಕಾಂಗ್ರೆಸ್ ಶಾಸಕನಾಗಿರುವ ಕಾರಣ ಬಿಜೆಪಿ ನಾಯಕರು ಕುತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಘವೇಂದ್ರ ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ವಾರ ಭದ್ರಾವತಿಗೆ ಬಂದು ಅವರ ಹಲ್ಕಾಗಿರಿ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ನ್ಯಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಸದನದಲ್ಲಿ ಶರ್ಟ್ ಬಿಚ್ಚುವ ಹಂತಕ್ಕೆ ಹೋದೆ ಎಂದಿದ್ದಾರೆ.
ಸ್ಪೀಕರ್ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅವರಿಗೆ ಪತ್ರ ಕೊಟ್ಟರೂ ಸರ್ಕಾರಕ್ಕೆ ಸೂಚನೆ ಕೊಟ್ಟಿಲ್ಲ. ಹೀಗಾಗಿ ಮನಸ್ಸಿಗೆ ನೋವಾಗಿ ಪ್ರತಿಭಟನೆ ಮಾಡಿದೆ ಎಂದರು.
ಶರ್ಟ್ ಬಿಚ್ಚಿದರೆ ಕ್ಷೇತ್ರದ ಜನರಿಗೆ ಏಕೆ ಅವಮಾನ ಆಗುತ್ತೆ? ನ್ಯಾಯ ಸಿಗದೇ ಇದ್ದಾಗ ನಾನು ಏನು ಮಾಡಬೇಕು? ನನ್ನ ಭಾವನೆ ಪ್ರಕಾರ ಅದು ಅತಿರೇಕ ಆಗಿಲ್ಲ ಎಂದು ಹೇಳಿದ್ದಾರೆ.
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ