ಮಂಡ್ಯ ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದ ಆಡಳಿತದಲ್ಲಿ ತುರ್ತಾಗಿ ಆರಂಭಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಮನವಿ ಮಾಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಸಿದ್ದು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಸುಮಾರು ವರ್ಷಗಳಿಂದ ಮೈಷುಗರ್ ಸ್ಥಗಿತಗೊಂಡಿರುವುದರಿಂದ ಜಿಲ್ಲಾ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆಯನ್ನು ಶೀಘ್ರವೇ ಪ್ರಾರಂಭ ಮಾಡುವಂತೆ ಮನವಿ ಮಾಡಲಾಯಿತು . ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ಸಿ.ಡಿ. ಗಂಗಾಧರ್ , ಮೈಷುಗರ್ ಕಾರ್ಖಾನೆಯ ಮಾಜಿ ಅಧ್ಯಕ್ಷರುಗಳಾದ ಹಾಲಹಳ್ಳಿ ರಾಮಲಿಂಗಯ್ಯ , ಸಿದ್ದರಾಮೇಗೌಡ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಿತ್ರ ರಮೇಶ್ , ಹೆಚ್.ಕೆ. ರುದ್ರಪ್ಪ ನಗರ ಸಭಾ ಸದಸ್ಯರಾದ ಶ್ರೀಧರ್ , ಪಕ್ಷದ ಮುಖಂಡರುಗಳಾದ ಸಿ.ಎಂ. ದ್ಯಾವಪ್ಪ , ಹಾಲಹಳ್ಳಿ ಸಂಪತ್ ಹಾಗೂ ಇತರರು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು