ತಮ್ಮ ವಿರುದ್ಧದ ಯಾವುದೇ ಸುದ್ದಿ ಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ 6 ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ.
ಮಾರ್ಚ್ 30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತರ ಇನ್ನೂ ಹಲವು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿದಂತ ಆರು ಸಚಿವರು, ತಮ್ಮ ವಿರುದ್ಧದ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ಕುರಿತಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20ರ ನ್ಯಾಯಾಧೀಶ ಬಿ.ಎಸ್.ವಿಜಯ ಕುಮಾರ್ ನ್ಯಾಯಪೀಠವು, ಅರ್ಜಿಯನ್ನು ಪುರಸ್ಕರಿಸಿ ರಾಜ್ಯದ ಎಲ್ಲಾ ಮಾಧ್ಯಮಗಳಿಗೆ 6 ಸಚಿವರ ಯಾವುದೇ ಮಾನಹಾನಿ ವರದಿಯನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ, ತುರ್ತು ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆ ಮಾರ್ಚ್ 30ಕ್ಕೆ ಮುಂದೂಡಿಕೆ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ