ಹಳೆಯ ವಾಹನ ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸಲು ಆಲೋಚಿಸುತ್ತಿರುವವರಿಗೆ ಕೇಂದ್ರ ಬಂಪರ್ ಕೊಡುಗೆ ನೀಡಿದೆ.
ಹಳೆಯ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿ ಮಾಡುವವರಿಗೆ ಆಟೊಮೊಬೈಲ್ ಕಂಪನಿಗಳು ಶೇ. 5 ರಷ್ಟು ರಿಯಾಯಿತಿ ನೀಡಲಿವೆ.
ಈ ವಿಷಯವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿ ವಾಹನಗಳನ್ನು ಸ್ವಇಚ್ಛೆಯಿಂದ ಗುಜರಿಗೆ ಹಾಕುವ ನೀತಿಯನ್ನು ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಈ ನೀತಿಯು ದೇಶದ ಆಟೊಮೊಬೈಲ್ ಉದ್ಯಮದ ಪಾಲಿಗೆ ವರ. ದೇಶದ ಅತ್ಯಂತ ಲಾಭದಾಯಕ ಉದ್ಯಮ ಎಂದಿದ್ದಾರೆ.
ಆಟೊಮೊಬೈಲ್ ಉದ್ಯಮದ ವಾರ್ಷಿಕ ವಹಿವಾಟು ಈಗ ₹ 4.5 ಲಕ್ಷ ಕೋಟಿ. ಈ ನೀತಿಯ ಕಾರಣದಿಂದಾಗಿ ಮುಂದಿನ ವರ್ಷಗಳಲ್ಲಿ ವಹಿವಾಟಿನ ಮೊತ್ತವು ₹ 10 ಲಕ್ಷ ಕೋಟಿಗೆ ಹೆಚ್ಚಳ ಆಗಬಹುದು.
ಹೊಸ ನೀತಿಯ ಪರಿಣಾಮವಾಗಿ ₹ 10 ಸಾವಿರ ಕೋಟಿಯಷ್ಟು ಹೂಡಿಕೆ ಆಗಲಿದೆ, 50 ಸಾವಿರ ಉದ್ಯೋಗ ಸೃಷ್ಟಿ ಕೂಡ ಆಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು