ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣದ ತನಿಖೆಯ ಹೊಣೆ ಎಸ್ ಐಟಿ ಹೆಗಲಿಗೆ

Team Newsnap
1 Min Read

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ)ಕ್ಕೆ ರಾಜ್ಯ ಸರ್ಕಾರ ಒಪ್ಪಿಸಿದೆ.

ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಸ್‍ಐಟಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

jarakihole

ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದಾರೆ. ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ ಅವರಿಗೆ ನೀಡಲಾಗಿದೆ.

ಎಸ್‍ಐಟಿ ತಂಡ ವಿಚಾರಣೆ ನಡೆಸಿ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆ ಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಶ್ರೀ ಸೌಮೇಂದು ಮುಖರ್ಜಿ, ಐಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದ್ದಾರೆ.

Share This Article
Leave a comment