ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಗೊತ್ತಾಗಿದೆ.
ಕಳೆದ ಕೆಲವು ವಾರಗಳಿಂದ ಸಿಡಿ ಕೇಸ್ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಈ ಸಂಬಂಧ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿ ತಂಡಕ್ಕೆ ಆದೇಶ ನೀಡಿದೆ.
ತನಿಖೆ ಆರಂಭಿಸಿದ ಮೊದಲ ದಿನವೇ ಅವರನ್ನು ವಶಕ್ಕೆ ಪಡೆದು ತನಿಖೆ ಚುರುಕು ಮಾಡಲಾಗಿದೆ.
ಸಿಐಡಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ನಡೆಯುತ್ತಿದೆ, ದಿನೇಶ್ ಕಲ್ಲಹಳ್ಳಿ ಮತ್ತು ಪ್ರಮುಖ ಆರೋಪಿ ಜೊತೆ ಲಿಂಕ್ ಆರೋಪದ ಮೇಲೆ ತನಿಖೆ ನಡೆಯುತ್ತಿದೆ.
ಮೂಲಗಳ ಪ್ರಕಾರ ಬಂಧಿತ ಆರೋಪಿ ಸಿಡಿಯನ್ನು ದಿನೇಶ್ ಕಲ್ಲಹಳ್ಳಿಗೆ ತೆಗೆದುಕೊಂಡು ಕೊಟ್ಟಿದ್ದಾನೆ ಅಂತಾ ಹೇಳಲಾಗಿದೆ.
ಈ ಸಿಡಿಯನ್ನು ಯಾರಿಂದ ಪಡೆದು ಯಾರಿಗೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ