ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ, ಸಿಡಿಯಲ್ಲಿ ಆ ವ್ಯಕ್ತಿಯ ಧ್ವನಿ ಅಸಲಿಯೋ, ನಕಲಿಯೋ ಎಂಬುದನ್ನು ಪರೀಕ್ಷೆ ನಡೆಸಲಾಗುತ್ತಿದೆ.
ವಿಡೀಯೋದಲ್ಲಿರುವ ಹಿನ್ನೆಲೆ ಧ್ವನಿ ಚಿಕ್ಕಮಗಳೂರು ವ್ಯಕ್ತಿಯದ್ದು ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ 10 ನಿಮಿಷಗಳ ಧ್ವನಿಯನ್ನು ಪೊಲೀಸರು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವೀಡಿಯೋ ಎಡಿಟಿಂಗ್ ವೇಳೆ ಹಿನ್ನೆಲೆ ಧ್ವನಿ ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಎಸ್‍ಎಲ್ ಮೂಲಕ ಸಿಡಿಕೋರನ ಧ್ವನಿ ಪರೀಕ್ಷೆ ನಡೆಸಲಾಗುತ್ತಿದೆ.
ಜಾರಕಿಹೊಳಿ ಸಿಡಿಯಲ್ಲಿದ್ದ ಆ ಧ್ವನಿಗೆ ಆ ವ್ಯಕ್ತಿಗೆ ಕಂಟಕ ಎದುರಾಗಲಿದೆ. ಸಿಡಿಕೋರನ ಆ ಮೂಲ ಧ್ವನಿಗೂ ವೀಡಿಯೋದಲ್ಲಿರುವ ಧ್ವನಿಗೂ ಸಾಮ್ಯತೆ ಇದೆಯಾ ಅಥವಾ ವಿಧಿ ವಿಜ್ಞಾನ ಪ್ರಯೋಗ ವೇಳೆ ಹಿನ್ನೆಲೆ ಧ್ವನಿಗೂ-ಮೂಲ ಧ್ವನಿಗೂ ಸಾಮ್ಯತೆ ಇದೆಯಾ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮೂಲದ ‘ಆ’ ಸಿಡಿಕೋರನ ಬಂಧಿಸುವ ಸಾಧ್ಯತೆ ಇದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ